ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಂಸ್ಕೃತಿ ಬಗ್ಗೆ ಅರಿತುಕೊಳ್ಳಿ ಡಾ.ಮೋನಪ್ಪ ಶಿರವಾಳ.

ವಿದ್ಯಾರ್ಥಿಗಳು ಕ್ರೀಡೆ ಮತ್ತು ಸಂಸ್ಕೃತಿ ಬಗ್ಗೆ ಅರಿತುಕೊಳ್ಳಿ ಡಾ.ಮೋನಪ್ಪ ಶಿರವಾಳ.
ಶಹಾಪುರ : ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕ್ರೀಡೆ,ಕಲೆ ಹಾಗೂ ಸಂಸ್ಕೃತಿ ಬಗ್ಗೆ ಅರಿತುಕೊಳ್ಳಬೇಕು ಏಕೆಂದರೆ ಇವು ಶಿಕ್ಷಣದ ಅವಿಭಾಜ್ಯ ಅಂಗವಾಗಿವೆ ಎಂದು ತಾಲೂಕು ಖಜಾನೆ ಅಧಿಕಾರಿಗಳು ಹಾಗೂ ಹಿರಿಯ ಸಂಶೋಧಕರಾದ ಡಾ.ಮೋನಪ್ಪ ಶಿರವಾಳ ಹೇಳಿದರು.
ತಾಲೂಕಿನ ಸಗರದ ಸರಕಾರಿ ಪದವಿ ಪೂರ್ವ ಕಾಲೇಜಿ ( ಕೆಪಿಎಸ್ ) ನಲ್ಲಿ ಆಯೋಜಿಸಿದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭವನ್ನು ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು, ವಿದ್ಯಾರ್ಥಿಗಳಾದವರು ಕಷ್ಟಪಟ್ಟು ಓದುವುದಕ್ಕಿಂತ ಇಷ್ಟಪಟ್ಟು ಓದಿ ಜೀವನದಲ್ಲಿ ಏನನ್ನಾದರೂ ಸಾಧಿಸಿ ಎಂದು ಸಲಹೆ ನೀಡಿದರು.
ಹಿರಿಯ ಉಪನ್ಯಾಸಕ ಸಾಬಪ್ಪ ಮೇತ್ರಿ ಮಾತನಾಡಿ ಇತ್ತೀಚಿನ ವಿದ್ಯಾರ್ಥಿಗಳು ಮೊಬೈಲ್ ಗೀಳು ಹಚ್ಚಿಕೊಂಡು ಕಲಿಕೆಯಿಂದ ದೂರ ಉಳಿಯುತ್ತಿದ್ದಾರೆ ಎಂದು ಕಳಬಳ ವ್ಯಕ್ತಪಡಿಸಿದರು,ಮೊಬೈಲ್ ವ್ಯಾಮೋಹ ಬಿಟ್ಟು ಅಭ್ಯಾಸ ಮಾಡಿದಾಗ ಮಾತ್ರ ಬದುಕಿನಲ್ಲಿ ಉತ್ತಮ ಪ್ರಜೆಗಳಾಗಲು ಸಾಧ್ಯ ಎಂದು ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಅಂಬಲಯ್ಯ ಎಂ.ಸೈದಾಪುರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು,ಈ ಸಮಾರಂಭದ ವೇದಿಕೆಯ ಮೇಲೆ ಕರ್ನಾಟಕ ಪಬ್ಲಿಕ್ ಶಾಲೆಯ ಉಪ ಪ್ರಾಂಶುಪಾಲರಾದ ವಿಶ್ವನಾಥ್ ಯರಗೋಳ,ಆಂಗ್ಲ ಭಾಷಾ ಉಪನ್ಯಾಸಕರಾದ ಭೀಮರೆಡ್ಡಿ ಪೊಲೀಸ್ ಪಾಟೀಲ್, ಮಂದೇವಾಲ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಮಲ್ಲಮ್ಮ,ಅತಿಥಿ ಶಿಕ್ಷಕಿ ಸುಧಾ,ವೆಂಕಟೇಶ್ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.