ರಾಜ್ಯಪಾಲರ ಅವಹೇಳನ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ
ರಾಜ್ಯಪಾಲರ ಅವಹೇಳನ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ
ಕಲಬುರಗಿ: ೨೨ ನೇ ಆಗಸ್ಟ್, ರಾಜ್ಯಪಾಲ ಥಾವರ್ ಚಂದ ಗೆಹ್ಲೋಟ್ ಅವರ ಕುರಿತು ಅವಹೇಳನ ಖಂಡಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ ಮಾಡಲಾಯಿತು. ರಾಜ್ಯಪಾಲರ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ಮುಡಾ ಹಗರಣ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಆಗ್ರಹಿಸಿ ಕಲಬುರಗಿ ಜಿಲ್ಲಾ ಬಿಜೆಪಿ ಪಕ್ಷದ ವತಿಯಿಂದ ಪ್ರತಿಭಟನೆ ಬೃಹತ್ ನಡೆಸಲಾಯಿತು..
ನಗರದ ಸರ್ದಾರ್ ವಲ್ಲಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಛೇರಿ ಬಂದು ಜಿಲ್ಲಾಧೀಕಾರಿಗಳ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ರಾಜ್ಯಪಾರಿಗೆ ಅವಮಾನ ಮಾಡಿದ ಕಾಂಗ್ರೆಸ್ ಕ್ರಮವನ್ನು ಖಂಡಿಸಿ ಹಾಗೂ ‘ಮುಡಾ’ ಹಗರಣದಲ್ಲಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಬಿಜೆಪಿ ಮುಖಂಡರು ಸಾಂಘಿಕವಾಗಿ ಆಗ್ರಹಿಸಿದರು.
ಅಲ್ಲದೆ, ಕೆಲವೆಡೆ ಕಾಂಗ್ರೆಸ್ ಮುಖಂಡರ ಭಾವಚಿತ್ರವನ್ನು ದಹಿಸಲಾಗಿದೆ. ಇದಲ್ಲದೆ, ಸಚಿವರಾದ ಜಮೀರ್ ಅಹ್ಮದ್, ಕೃಷ್ಣಬೈರೇಗೌಡ, ವಿಧಾನಪರಿಷತ್ ಸದಸ್ಯ ಐವಾನ್ ಡಿಸೋಜ ಮೊದಲಾದವರು ರಾಜ್ಯಪಾಲರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಕೊಟ್ಟಿದ್ದಾರೆ. ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಮುಖಂಡ ರಕ್ಷಿತ್ ಶಿವರಾಂ ಅವರು ಪ್ರಧಾನಿಯವರ ವಿರುದ್ಧ ಆಕ್ಷೇಪಾರ್ಹ ಮಾತನಾಡಿದ್ದಾರೆ. ಹೀಗಾಗಿ ಅವರು ವಿರುದ್ಧ ಕ್ರಮ ಕೈಗೊಳ್ಳಲು ಒತ್ತಾಯಿಸಿದರು.
ಹಿಂಸೆಗೆ ಪ್ರಚೋದಿಸುವ ಹೇಳಿಕೆಗಳನ್ನು ಕಾಂಗ್ರೆಸ್ಸಿಗರು ನೀಡುತ್ತಿದ್ದು, ಇದರ ವಿರುದ್ಧ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ಪ್ರಕರಣಗಳನ್ನು ದಾಖಲಿಸಬೇಕು ಎಂದೂ ಆಗ್ರಹಿಸಿದ್ದಾರೆ.
ಶಾಸಕ ಬಸವರಾಜ ಮತಿಮಡು ಡಾ ಅವಿನಾಶ್ ಜಾಧವ್, ಮಾಜಿ ಶಾಸಕರಾದ ರಾಜಕುಮಾರ್ ಪಾಟೀಲ್ ತೇಲ್ಕೂರ,
ದತ್ತಾತ್ತ್ರೆಯ ಪಾಟೀಲ್ ರೇವೂರ ,ಅಮರನಾಥ ಪಾಟೀಲ್, ಬಿಜೆಪಿ ಎಸ್ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಡಾ ಅಂಬಾರಾಯ ಅಷ್ಠಗಿ ಕಾಡಾ ಮಾಜಿ ಅಧ್ಯಕ್ಷ ಶರಣಪ್ಪ ತಳವಾರ ರಾಜ್ಯ ಬಿಜೆಪಿ ಒಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅವಣ್ಣ ಮ್ಯಾಕೇರಿ, ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೆವಾಡಿಗಿ , ಶಿವಾ ಅಷ್ಠಗಿ, ದಿಲೀಪ ಪಾಟೀಲ ಸೇರಿದಂತೆ ಪಕ್ಷದ ಅನೇಕ ಮುಂಖಡರು ಕಾರ್ಯಕರ್ತರು ಇದ್ದರು.