ಬಸವೇಶ್ವರ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗೆ ವಿಶೇಷ ಆರೋಗ್ಯ ಶಿಬಿರ

ಬಸವೇಶ್ವರ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗೆ ವಿಶೇಷ ಆರೋಗ್ಯ ಶಿಬಿರ

ಬಸವೇಶ್ವರ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗೆ ವಿಶೇಷ ಆರೋಗ್ಯ ಶಿಬಿರ

ಕಲಬುರ್ಗಿ ಅ08: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆ, ಓ ಆರ್ ಡಿ ಐ(ಆರ್ಗನೈಜೇಷನ್ ಆಫ್ ರೇರ್ ಡಿಸಿಜ್ ಆಫ್ ಇಂಡಿಯಾ), ವಿಕಾಸ ಅಕಾಡೆಮಿ, ಮನಸ್ವಿನಿ ಹಾಗೂ ಪರಿವರ್ತನಾ ಮಂದಿರ ಶಾಲೆ ಇವರ ಸಂಯುಕ್ತ ಆಶ್ರಯದಲ್ಲಿ ಪ್ರಪ್ರಥಮ ಬಾರಿಗೆ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಕಲಚೇತನ ಮಕ್ಕಳಿಗಾಗಿ ವಿಶೇಷ ಆರೋಗ್ಯ ತಪಾಸಣಾ ಹಾಗೂ ಚಿಕಿತ್ಸಾ ಶಿಬಿರವನ್ನು ಇದೇ ದಿನಾಂಕ 10 ಅಗಸ್ಟ್ ರವಿವಾರದಂದು ಹಮ್ಮಿಕೊಳ್ಳಲಾಗಿದೆ. ಈ ವಿಶೇಷ ಶಿಬಿರವು ಸಂಪೂರ್ಣವಾಗಿ ಉಚಿತವಾಗಿದ್ದು ಬಸವೇಶ್ವರ ಆಸ್ಪತ್ರೆಯ ಮೂರನೇ ಮಹಡಿಯ ಹೊರ ರೋಗಿಗಳ ವಿಭಾಗದಲ್ಲಿ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಿ ಸಾಯಂಕಾಲ 4 ಗಂಟೆಯವರೆಗೆ ನಡೆಯಲಿದೆ.

ಈ ವಿಕಲಚೇತನರ ವಿಶೇಷ ಶಿಬಿರವನ್ನು ಸಂಸ್ಥೆಯ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ ನಮೋಶಿ ಉದ್ಘಾಟಿಸಿ ಚಾಲನ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷರಾದ ರಾಜಾ ಭಿ ಭೀಮಳ್ಳಿ ಕಾರ್ಯದರ್ಶಿಗಳಾದ ಉದಯಕುಮಾರ್ ಚಿಂಚೋಳಿ ಜಂಟಿ ಕಾರ್ಯದರ್ಶಿಗಳಾದ ಡಾ ಕೈಲಾಸ ಪಾಟೀಲ್ ಆಸ್ಪತ್ರೆಯ ಸಂಚಾಲಕರಾದ ಡಾ ಕಿರಣ್ ದೇಶಮುಖ್ ಹಾಗೂ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ ಶರಣಬಸಪ್ಪ ಹರವಾಳ ಹಾಗೂ ಆಡಳಿತ ಮಂಡಳಿ ಸದಸ್ಯರು ಉಪಸ್ಥಿತರಿರಲಿದ್ದಾರೆ.

ಈ ವಿಶೇಷ ಶಿಬಿರದಲ್ಲಿ ಮಕ್ಕಳ ಎಲ್ಲ ರೋಗಗಳಿಗೆ ಸಂಬಂಧಿಸಿದ ವಿಶೇಷ ತಜ್ಞ ವೈದ್ಯರು ಭಾಗವಹಿಸಿ ತಪಾಸಣೆ ಮಾಡಿ ಚಿಕಿತ್ಸೆ ನೀಡಲಿದ್ದಾರೆ 

ಈ ಶಿಬಿರದ ನೇತೃತ್ವವನ್ನು ಮಕ್ಕಳ ನರ ರೋಗ ತಜ್ಞರಾದ ಡಾ ಆರುಂಧತಿ ಪಾಟೀಲ್ ವಹಿಸಲಿದ್ದಾರೆ ಇವರ ತಂಡದಲ್ಲಿ ನೇತ್ರ ತಜ್ಞರು,ಕಿವಿ ಮೂಗು ಗಂಟಲು ತಜ್ಞ ವೈದ್ಯರು, ಚರ್ಮ ರೋಗ ತಜ್ಞರು, ದಂತ ವೈದ್ಯರು,ಮೂಳೆ ರೋಗ ತಜ್ಞರು, ಫಿಸಿಯೋಥೆರಪಿ ವಿಭಾಗದವರು ಹಾಗೂ ಆಪ್ತ ಸಮಾಲೋಚಕರು ಭಾಗವಹಿಸಲಿದ್ದಾರೆ. ಈ ವಿಶೇಷ ಶಿಬಿರದ ಪ್ರಯೋಜನೆ ಪಡೆದುಕೊಳ್ಳಬೇಕೆಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.