ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುವುದು ಖಂಡನೀಯ

ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುವುದು ಖಂಡನೀಯ
ಕಲಬುರಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಕುರಿತು ಅಪಪ್ರಚಾರ ಮಾಡುವುದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡುವ ಕೆಲಸ ಖಂಡನೀಯವಾಗಿದೆ. ಉದ್ದೇಶ ಪೂರಕವಾಗಿ ಧರ್ಮಸ್ಥಳದ ಹೆಸರಿಗೆ ಕಳಂಕ ತರುವ ಹುನ್ನಾರವಾಗಿದೆ ಎಂದು ಕನ್ನಡ ಭೂಮಿ ಜಾಗೃತಿ ಸಮಿತಿಯ ವಕ್ತಾರ ಆನಂದ ತೆಗನೂರ ತಿಳಿಸಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,ಶ್ರೀ ಕ್ಷೇತ್ರ ಧರ್ಮಸ್ಥಳ 800 ವರ್ಷಗಳ ಇತಿಹಾಸ ಹೊಂದಿದೆ. ನಿರಂತರ ಅನ್ನ,ಅಕ್ಷರ ದಾಸೋಹ, ಔಷಧ ದಾನ ನಡೆಸುತ್ತಾ ಬಂದಿದೆ. ಜತೆಗೆ ಸ್ವ- ಸಹಾಯ ಗುಂಪುಗಳ ಮೂಲಕ ಅನೇಕ ಮಹಿಳೆಯರಿಗೆ ದಾರಿ ದೀಪವಾಗಿದ್ದು, ಈ ಬಗ್ಗೆ ಅಪಪ್ರಚಾರ ಮಾಡುತ್ತಿರುವುದು ಖಂಡನೀಯವಾಗಿದೆ ಎಂದರು.
ಧರ್ಮಸ್ಥಳ ಧರ್ಮಾಧಿಕಾರಿಗಳ ಸಮಾಜ ಮುಖಿ
ಹಾಗೂ ಶಿಕ್ಷಣ ಮುಖಿ ಕಾರ್ಯಗಳನ್ನು ಕಂಡು ಸಹಿಸದ ಕೆಲ ಸಮಾಜ ಘಾತುಕ ಶಕ್ತಿಗಳು ಧರ್ಮಸ್ಥಳದ ಹೆಸರಿಗೆ ಕಳಂಕ ತರಬೇಕು ಎಂಬ ಯೋಜನೆಯಲ್ಲಿ ತೊಡಗಿವೆ. ಧರ್ಮಸ್ಥಳ ಕ್ಷೇತ್ರವು ಇಲ್ಲಿಯವರೆಗೆ ಮಾಡುತ್ತಾ ಬಂದಿರುವ ಕಾರ್ಯಗಳು ಶ್ಲಾಘನೀಯ. ನಾವು ದುಷ್ಟ ಶಕ್ತಗಳ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ ಎಂದರು.ಆದರೆ ಕೆಲ ದುಷ್ಕರ್ಮಿಗಳು ಹಾದಿ ಬೀದಿಗಳಲ್ಲಿ ನ್ಯಾಯ ಕೇಳುವುದು, ವಾಕ್ ಸ್ವಾತಂತ್ರ್ಯವಿದೆ ಎಂದು ಯಾರದೋ ಮಾನಹಾನಿ ಮಾಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದ ಅವರು ಧರ್ಮಸ್ಥಳ ಧರ್ಮಾಧಿಕಾರಿಗಳಿಗೆ ಎಲ್ಲರೂ ನೈತಿಕ ಬೆಂಬಲ ನೀಡೋಣ ಎಂದರು.