ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಜೊತೆಗೆ ಸಂಸ್ಕಾರ ಮುಖ್ಯ.

ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಜೊತೆಗೆ ಸಂಸ್ಕಾರ  ಮುಖ್ಯ.

ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ಜೊತೆಗೆ ಸಂಸ್ಕಾರ ಮುಖ್ಯ.

ಶಹಾಪುರ : ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವುದರ ಜೊತೆಗೆ ಸಂಸ್ಕಾರ ನೀಡಿ ಪ್ರೋತ್ಸಾಹಿಸುವುದು ಬಹಳ ಮುಖ್ಯ ಎಂದು ಸೇಂಟ್ ಪೀಟರ್ ಶಾಲೆಯ ಮುಖ್ಯಸ್ಥರಾದ ಸ್ಟಿಫನ್ ಪ್ರಕಾಶ್ ಫಾದರ್ ಹೇಳಿದರು.

ನಗರದ ಆರ್.ವೈ.ದಿಗ್ಗಿ ಕಾಲೇಜಿನಲ್ಲಿ ಆಯೋಜಿಸಿದ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಸಸಿಗೆ ನೀರೆರೆದು ಮಾತನಾಡಿದರು. ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ವೇದಿಕೆ ಕಲ್ಪಿಸಿಕೊಟ್ಟಾಗ ಮಾತ್ರ ಅವಲಿರುವ ಅವರಲ್ಲಿರುವ ಪ್ರತಿಭೆ ಹೊರಹೊಮ್ಮಲು ಸಾಧ್ಯ ಎಂದು ನುಡಿದರು.

ಯುವ ಸಾಹಿತಿ ಬಸವರಾಜ ಸಿನ್ನೂರ ಮಾತನಾಡಿ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವುದರ ಜೊತೆಗೆ ವೈಚಾರಿಕತೆಯ ಚಿಂತನೆಗಳ ಜೊತೆಗೆ ದೇಶಾಭಿಮಾನ ರಾಷ್ಟ್ರೀಯ ಭಾವೈಕ್ಯತೆಯ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು, ಅವರಲ್ಲಿ ಹುದುಗಿರುವ ಕಲೆ ಸಾಹಿತ್ಯ ಸಂಗೀತ ಸಂಸ್ಕೃತಿಗೆ ಹೆಚ್ಚು ಒತ್ತುಕೊಟ್ಟು ಪ್ರೋತ್ಸಾಹಿಸಬೇಕು ಎಂದು ನುಡಿದರು.

ಸಂಸ್ಥೆಯ ಅಧ್ಯಕ್ಷರಾದ ಮಹೇಂದ್ರ ದಿಗ್ಗಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು ಈ ಸಮಾರಂಭದ ವೇದಿಕೆಯ ಮೇಲೆ ಕನಕದಾಸ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ತಿಪ್ಪಣ್ಣ ಖ್ಯಾತನಾಳ, ನಾಗರಾಜ್ ಪ್ರಾಂಶುಪಾಲರಾದ ಮಲ್ಲಿಕಾ ಎಂ ದಿಗ್ಗಿ,ಕಾಲೇಜಿನ ಸಿಬ್ಬಂದಿ ಉಪನ್ಯಾಸಕರಾದ ಸಂಗಮೇಶ್ ಪಾಟೀಲ್, ಮಾಸ್ತಿಗೌಡ, ರವಿ ಭಂಡಾರಿ ಸಂಗಮೇಶ್ ರಸ್ತಾಪುರ,ಜಗದೀಶ್ ಕಾವೇರಿ,ಶ್ವೇತಾ,ಇತರರು ಉಪಸ್ಥಿತರಿದ್ದರು ನಂತರ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.