ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಒಮ್ಮತದ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಒಮ್ಮತದ ಆಯ್ಕೆ

ಉಪರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಒಮ್ಮತದ ಆಯ್ಕೆ

ಆಗಸ್ಟ್ 17, 2025ಉಪ ರಾಷ್ಟ್ರಪತಿಯಾಗಿದ್ದ ಜಗದೀಪ ಧನಕರ ಅವರ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಮರುಚುನಾವಣೆ ನಡೆಯಲಿದೆ .

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರ ಹೆಸರನ್ನು ಒಮ್ಮತದಿಂದ ಘೋಷಿಸಲಾಗಿದೆ.

ತಮಿಳುನಾಡು ಮೂಲದ ಸಿ ಪಿ ರಾಧಾಕೃಷ್ಣನ್ ಅವರು ಬಿಜೆಪಿಯ ನಾಯಕರಲ್ಲಿ ಪ್ರಮುಖರಾಗಿದ್ದಾರೆ.

ಅವರು ಈ ಹಿಂದೆ ಜಾರ್ಖಂಡ್‌ನ ರಾಜ್ಯಪಾಲರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಲ್ಲದೆ ಕೊಯಂಬತ್ತೂರಿನಿಂದ 2 ಬಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು.

ಇಂದು, ಭಾನುವಾರ ದೆಹಲಿಯಲ್ಲಿ ನಡೆದ ಬಿಜೆಪಿಯ ಉನ್ನತ ಮಟ್ಟದ ಸಭೆಯಲ್ಲಿ ಈ ತಿರ್ಮಾನ ಕೈಗೊಳ್ಳಲಾಗಿದೆ. ತೆರವಾಗಿರುವ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬ‌ರ್ 9ರಂದು ಚುನಾವಣೆ ನಡೆಯಲಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಭೆಯ ನಂತರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಕೇಂದ್ರ ಸಚಿವ ಜೆ.ಪಿ. ನಡ್ಡಾ ಅವರು ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಆಯ್ಕೆಯನ್ನು ಘೋಷಿಸಿದರು.

 ತಮಿಳುನಾಡಿನಲ್ಲಿ ಬಿಜೆಪಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ ಬೆಳೆಸಿದ ಹಿರಿಮೆಗೆ ಅವರು ಪಾತ್ರರಾಗಿದ್ದಾರೆ.

2004 ರಿಂದ 2007ರ ವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ತಮಿಳುನಾಡಿನಲ್ಲಿ 93 ದಿನಗಳ ರಥಯಾತ್ರೆ ನಡೆಸಿ ಪಕ್ಷ ಸಂಘಟಿಸಿದ ಕೀರ್ತಿ ರಾಧಾಕೃಷ್ಣನ್ ಅವರಿಗೆ ಸಲ್ಲುತ್ತದೆ. 2012ರಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತನ ಮೇಲಿನ ದಾಳಿ ವಿರೋಧಿಸಿ ಮೆಟ್ಟುಪಾಲಯಂನಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದರು. ಈ ವೇಳೆ ತಮಿಳನಾಡು ಪೊಲೀಸರು ಅವರನ್ನು ಬಂಧಿಸಿದ್ದರು.

2004ರ ವಿಶ್ವಸಂಸ್ಥೆಗೆ ತೆರಳಿದ ಸಂಸತ್ ನಿಯೋಗದ ಸದಸ್ಯರಾಗಿದ್ದ ಸಿಪಿ ರಾಧಾಕೃಷ್ಣನ್, 58ನೇ ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ತಮ್ಮ ಭಾಷಣದ ಮೂಲಕ ಎಲ್ಲರ ಗಮನ ಸೆಳೆದಿದ್ದರುರು.