ಸದ್ಭಾವನಾ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ

ಸದ್ಭಾವನಾ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ
ಬೆಂಗಳೂರು:ಎಲ್ಲ ಧರ್ಮ, ಭಾಷೆ ಹಾಗೂ ರಾಜ್ಯಗಳ ಜನರಲ್ಲಿ ಬಾಂಧವ್ಯ ಹಾಗೂ ಶಾಂತಿಯನ್ನು ಉತ್ತೇಜಿಸುವ ಉದ್ದೇಶದಿಂದ ಪ್ರತಿ ವರ್ಷ ಆಗಸ್ಟ್ 20ರಂದು ಸದ್ಭಾವನಾ ದಿನವನ್ನು ರಾಷ್ಟ್ರಮಟ್ಟದಲ್ಲಿ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ದಿನಾಂಕ 20.08.2025 (ಬುಧವಾರ)ರಂದು ಬೆಳಗ್ಗೆ 10.45ಕ್ಕೆ ಬೆಂಗಳೂರಿನ ವಿಧಾನ ಸೌಧದ 3ನೇ ಮಹಡಿಯಲ್ಲಿ (ಕೊಠಡಿ ಸಂ.: 334) ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿವರು ಸ್ವತಃ ಸದ್ಭಾವನಾ ಪ್ರತಿಜ್ಞೆಗೆ ನೇತೃತ್ವ ವಹಿಸಲಿದ್ದಾರೆ. ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ರಾಜಕೀಯ) ಇಲಾಖೆಯ ಶಾಖಾಧಿಕಾರಿ ಶ್ರೀ ವಿಜಯ ರಾಘವ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರ್ಯಕ್ರಮದ ಸಂದರ್ಭಕ್ಕೆ ಸಚಿವಾಲಯದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿವರ್ಗದವರು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮಕ್ಕೆ ತಪ್ಪದೇ ಹಾಜರಾಗುವಂತೆ ದೂರವಾಣಿಯ ಮೂಲಕ ಹಾಗೂ ಅಧಿಕೃತ ಪ್ರಕಟಣೆಯ ಮೂಲಕ ಸೂಚಿಸಲಾಗಿದೆ.
ಸದ್ಭಾವನಾ ದಿನದ ಮಹತ್ವ:
ಮಾನವೀಯ ಸಾಮರಸ್ಯ, ಸಹಬಾಳ್ವೆ, ಸಹಿಷ್ಣುತೆ ಮತ್ತು ಅಹಿಂಸೆಯ ತತ್ವಗಳನ್ನು ಜನರಲ್ಲಿ ಬೆಳೆಸುವುದು ಇದಿನದ ಉದ್ದೇಶವಾಗಿದೆ. ರಾಷ್ಟ್ರೀಯ ಏಕತೆ ಹಾಗೂ ಸೌಹಾರ್ದತೆಯ ಸಂದೇಶ ಸಾರುವ ಈ ದಿನವನ್ನು ಸಂಭ್ರಮದಿಂದ ಹಾಗೂ ಶಿಸ್ತುಪೂರ್ವಕವಾಗಿ ಆಚರಿಸಲು ಸರ್ಕಾರ ಕ್ರಮ ಕೈಗೊಂಡಿದೆ.