ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ

ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ

ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಆಗುತ್ತಿರುವ ಅನ್ಯಾಯದ ಕುರಿತು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆ ಕೇಳಿದ ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ

ಕಲಬುರ್ಗಿ ಅ21: ರಾಜ್ಯದಲ್ಲಿ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ನಿಯಮಗಳ ಮುಖಾಂತರ ನೇಮಕಾತಿ ಮಾಡುತ್ತಿರುವುದರಿಂದ ಕಲ್ಯಾಣ ಕರ್ನಾಟಕದ ಭಾಗದ 371 ಜೇ ಅಭ್ಯರ್ಥಿಗಳಿಗೆ ನೇಮಕಾತಿ ಹಾಗೂ ಬಡ್ತಿ ಯಲ್ಲಿ ಭಾರಿ ಪ್ರಮಾಣದಲ್ಲಿ ಅನ್ಯಾಯವಾಗುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಇಂದು ಸದನದಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯನ್ನು ಮಾನ್ಯ ಮುಖ್ಯಮಂತ್ರಿಗಳಿಗೆ ಮಾಡಿದರು.

ಕಲ್ಯಾಣ ಕರ್ನಾಟಕದ ಭಾಗದಲ್ಲಿ ಸಂವಿಧಾನ ವಿಶೇಷ ವಿಧಿ 371 ಜೇ ಬಂದನಂತರ ಈ ಭಾಗದ ನೇಮಕಾತಿ ಹಾಗೂ ಬಡ್ತಿ ವಿಷಯಕ್ಕೆ ಸಂಬಂಧಿಸಿದಂತೆ 2016 ರಿಂದ 2025 ರ ವರೆಗೆ ಅನೇಕ ಸುತ್ತೋಲೆಗಳನ್ನು ಸರ್ಕಾರ ಹೊರಡಿಸಿದೆ. ಈ ಎಲ್ಲ ಸುತ್ತೋಲೆ ಗಳಿಂದ ಗೊಂದಲವುಂಟಾಗಿ ಬೇರೆ ಬೇರೆ ನೇಮಕಾತಿ ಪ್ರಾಧಿಕಾರಗಳು ವಿಭಿನ್ನ ರೀತಿಯಲ್ಲಿ ನೇಮಕಾತಿ ಮಾಡಿಕೊಂಡಿದ್ದರಿಂದ ನಮ್ಮ ಭಾಗದ ಯುವಕರಿಗೆ ಭಾರಿ ಅನ್ಯಾಯವಾಗುತ್ತಿದೆ ಆದ್ದರಿಂದ ಈ ಅನ್ಯಾಯವನ್ನು ತಡೆಯಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು.ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಇತ್ತಿಚೆಗೆ 03-06-2025 ರಂದು ಮತ್ತೊಂದು ಆದೇಶ ಹೊರಡಿಸಿದ್ದು ಈ ಆದೇಶವು ಸಹ ಬಹಳಷ್ಟು ಗೊಂದಲ ಹೊಂದಿದೆ ಸ್ಥಳಿಯ ವೃಂದ ಹಾಗೂ ಮೂಲ ವೃಂದ ಮಾಡಿ ಅದರಲ್ಲಿ ಕಂಪಾರ್ಟಮೆಂಟ್ ಮಾಡಿದ್ದು ಅವೈಜ್ಞಾನಿಕವಾಗಿದ್ದು ಇದನ್ನು ಸರಿಪಡಿಸಬೇಕು, ಎಸ್ಸಿ ಎಸ್ಟಿ ಮೀಸಲಾತಿಯನ್ನು ಹೇಗೆ ಪರಿಗಣಿಸುತ್ತೇವೆಯೋ ಅದೇ ರೀತಿ ಕಲ್ಯಾಣ ಕರ್ನಾಟಕ ಮೀಸಲಾತಿಯನ್ನು ನೇಮಕಾತಿ ಹಾಗೂ ಬಡ್ತಿ ಯಲ್ಲಿ ಪರಿಗಣಿಸಬೇಕೆಂದು ಆಗ್ರಹಿಸಿದರು ಇದಕ್ಕೆ ಉತ್ತರ ನೀಡಿದ ಮಾನ್ಯ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಭಾಗದ ಸಚಿವರಾದ ಮಾನ್ಯ ಪ್ರಿಯಾಂಕಾ ಖರ್ಗೆ ಅವರ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಮೀಸಲಾತಿ ಕುರಿತು ಸಚಿವ ಸಂಪುಟ ಉಪಸಮಿತಿ ರಚಿಸಲಾಗಿದ್ದು ಅವರು ಅದೆ ಭಾಗದವರಾಗಿರುವರಿಂದ ಅವರು ಸರಿ ಮಾಡುವ ವಿಶ್ವಾಸವಿದೆ ಅವರು ಈಗ ವಿದೇಶದಲ್ಲಿದ್ದು ಅವರು ಬಂದ ನಂತರ ಆ ಆದೇಶದ ಬಗ್ಗೆ ಗೊಂದಲವಿದ್ದರೆ ಅದನ್ನು ಸರಿಪಡಿಸುವ ಕೆಲಸ ಖಂಡಿತ ಮಾಡುತ್ತೇನೆ ಎಂದು ಹೇಳಿದರು ಅಷ್ಟೇ ಅಲ್ಲದೆ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಕಾನೂನು ನೀಡಿದ್ದು ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕದ ನೇಮಕಾತಿ ಹಾಗೂ ಬಡ್ತಿ ಎಂದು ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದರು ನಮೋಶಿಯವರ ಸಲಹೆಯನ್ನು ನಾನು ಪರಿಗಣಿಸುತ್ತೇವೆ ಎಂದು ಹೇಳಿದರು.