ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತೈಯಾರಿ

ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತೈಯಾರಿ

ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತೈಯಾರಿ 

ಕಲಬುರಗಿ: ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಇಂದು ಮಹಾವಿದ್ಯಾಲಯದ ಆವರಣದಲ್ಲಿ ಪರಿಸರ ಸ್ನೇಹಿ ಗಣಪತಿ ವಿಗ್ರಹಗಳ ತೈಯಾರಿ ಮಾಡಿದರು.

ಈ ಕಾರ್ಯಕ್ರಮವನ್ನು ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ರಾಜೇಂದ್ರ ಕೊಂಡಾ ಅವರು ಉದ್ಘಾಟಿಸಿದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಇಂದು ಪರಿಸರ ರಕ್ಷಣೆ ಮಾಡುವದು ನಮ್ಮೆಲ್ಲರ ಹೊಣೆ, ನಾವು ಆದಷ್ಟು ಪರಿಸರ ರಕ್ಷಣೆ ಮಾಡಬೇಕು. ಈ ಕಾರಣಕ್ಕಾಗಿಯೇ ನಮ್ಮ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಿಗೆ ಕಲಿಕೆಯ ಜೊತೆಗೆ ಅವರಲ್ಲಿರುವ ಕೌಶಲ್ಯ ಅಭಿವೃದ್ಧಿಗಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಎಂದು ನುಡಿದರು.

ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಅತಿ ಉತ್ಸಾಹ ದಿಂದ ಭಾಗವಹಿಸಿದ್ದರು ಎಂದು ಕಾಲೇಜಿನ ಪತ್ರಿಕಾ ಮಾಧ್ಯಮ ಸಲಹೆಗಾರರಾದ ಡಾ. ಮಹೇಶ ಗಂವಾರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.