ಜಮಖಂಡಿ ಗ್ರಾಮದಲ್ಲಿ ಬಸ್ಸಿನ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳ ಪರದಾಟ – ಶಾಸಕ ಡಾ. ಅಜಯ್ ಸಿಂಗ್ ವಿರುದ್ಧ ಪ್ರತಿಭಟನೆ
ಜಮಖಂಡಿ ಗ್ರಾಮದಲ್ಲಿ ಬಸ್ಸಿನ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳ ಪರದಾಟ – ಶಾಸಕ ಡಾ. ಅಜಯ್ ಸಿಂಗ್ ವಿರುದ್ಧ ಪ್ರತಿಭಟನೆ
ಯಡ್ರಾಮಿ ತಾಲೂಕಿನ ಜಮಖಂಡಿ ಗ್ರಾಮದ ವಿದ್ಯಾರ್ಥಿಗಳು ಬಸ್ಸಿನ ಸೌಲಭ್ಯವಿಲ್ಲದ ಕಾರಣ ಪರದಾಡುತ್ತಿದ್ದಾರೆ. ಬಿಳವಾರ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಗೆ ಹಲವು ದಿನಗಳಿಂದ ನಡೆದುಕೊಂಡು ಹೋಗುವಂತಾಗಿದೆ. ರಸ್ತೆಯ ದುಸ್ಥಿತಿ ಕಾರಣದಿಂದ ಈ ಮಾರ್ಗದಲ್ಲಿ ಬಸ್ಸಿನ ಸಂಚಾರ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳ ಜೀವನ ಕಷ್ಟಕರವಾಗಿದೆ.
ಈ ಬಗ್ಗೆ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಹಾಗೂ ಗ್ರಾಮ ಪಂಚಾಯತ್ ಸದಸ್ಯರಿಗೆ ಮನವಿ ಸಲ್ಲಿಸಿದರೂ ಸ್ಪಂದನೆ ದೊರೆಯಲಿಲ್ಲ. ಇದರಿಂದ ಬೇಸತ್ತ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಬಿಳವಾರ ಗ್ರಾಮ ಪಂಚಾಯತ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಮಾಧ್ಯಮದೊಂದಿಗೆ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಒಂದು ವಾರದೊಳಗೆ ಸಮಸ್ಯೆ ಬಗೆಹರಿಸದೆಹೊಯಲ್ಲಿ, ಶಾಸಕ ಅಜಯ್ ಸಿಂಗ್ ಅವರು ಮನೆ ಎದುರು,ಕಲಬುರ್ಗಿ ಜಿಲ್ಲಾ ಪಂಚಾಯತ್ ಕಾರ್ಯಾಲಯ ಹಾಗೂ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು
ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು ತಾಲೂಕಿನ ಶಾಸಕರಾದ ಡಾ. ಅಜಯ್ ಸಿಂಗ್ ವಿರುದ್ಧ ಧಿಕ್ಕಾರ ಕೂಗಿದರು. ಕೂಡಲೇ ಸಂಬಂಧಪಟ್ಟ ಇಲಾಖೆಗೆ ಸೂಚಿಸಿ ರಸ್ತೆ ಸುಧಾರಣೆ ಮಾಡಿ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಕ್ಕಾಗಿ ಬಸ್ಸಿನ ಸೌಲಭ್ಯ ಒದಗಿಸುವಂತೆ ಜಮಖಂಡಿ ಗ್ರಾಮ ಪಂಚಾಯತ್ ಸದಸ್ಯ ಅಯ್ಯಣ್ಣಗೌಡ ಪೊಲೀಸ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದರು.
ವರದಿ: ಜೆಟ್ಟಪ್ಪ ಎಸ್. ಪೂಜಾರಿ