27ಕ್ಕೆ ವಿವಿಧ ಸಂಕಟಣೆಗಳಿಂದ ರಾಜಭವನ ಚಲೋ

27ಕ್ಕೆ ವಿವಿಧ ಸಂಕಟಣೆಗಳಿಂದ ರಾಜಭವನ ಚಲೋ

ಕಲಬುರಗಿ: ಸಿಎಂ ಸಿದ್ದರಾಮಯ್ಯ ಅವರ ತೇಜೋವಧೆ ಖಂಡಿಸಿ... ರಾಜ್ಯ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುತ್ತಿರುವ ಬಿಜೆಪಿ-ಜೆಡಿಎಸ್ ಕುತಂತ್ರಗಳನ್ನು ವಿರೋಧಿಸಿ... ಪುಜಾಪ್ರಭುತ್ವದ ರಕ್ಷಣೆಗಾಗಿ. ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ತೀರ್ಮಾನಿಸಿದೆ ಎಂದರು 

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟಗಳ ಅಧ್ಯಕ್ಷರು 27 ಆಗಸ್ಟ್ 2024, ಮಂಗಳವಾರ ಬೆಳಗ್ಗೆ 11-00 ಗಂಟೆಗೆ ಬೆಂಗಳೂರು ರೈಲು ನಿಲ್ದಾಣದಿಂದ ಪ್ರಾರಂಭ ಗೊಂಡು ಬೆಂಗಳೂರು ನಗರದ

ಸ್ವತಂತ್ರ ಉದ್ಯಾನವನ (ಫ್ರೀಡಂ ಪಾರ್ಕ್]. ಗಾಂಧಿನಗರ, ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು. 

ಕರ್ನಾಟಕದ ರಾಜ್ಯಪಾಲರಾದ ತಾವರ ಚಂದ ಗೆಲೊಟ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮೇಲೆ ಪ್ರಾಸಿಕ್ಯೂಷನ್ನಿಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ರಾಜಭವನವನ್ನು ಕೋಮುವಾದಿ ರಾಜಕಾರಣ ಮಾಡುತ್ತಿರುವ ಬಿಜೆಪಿ ಮತ್ತು ಪೂಡಲ್‌ವಾದಿ ರಾಜಕಾರಣ ಮಾಡುತ್ತಿರುವ ಜೆಡಿಎಸ್ ಪಕ್ಷಗಳ ಕಛೇರಿಯನ್ನಾಗಿ ಪರಿವರ್ತಿಸಿಕೊಂಡಿದ್ದಾರೆ.

 ರಾಜ್ಯಪಾಲರು ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರುವುದಷ್ಟೆ ಅಲ್ಲ ತೀವು ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾಗಿರುವ ಮುಖ್ಯಮಂತ್ರಿಗಳ ವಿರುದ್ದ ನಡೆಯುತ್ತಿರುವ ಪಿತೂರಿ- ಷಡ್ಯಂತ್ರಗಳ ಭಾಗವಾಗಿದ್ದಾರೆ. ಆ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನು ದುಷ್ಟರು, ಭ್ರಷ್ಟರೂ ಆದ ಬಿಜೆಪಿ-ಜೆಡಿಎಸ್ ಪಕ್ಷಗಳ ಹಿತಾಸಕ್ತಿಗೆ ಆಡ ಇಟ್ಟಿದ್ದಾರೆ.

 ಕರ್ನಾಟಕ ಲೋಕಾಯುಕ್ತ, ಎಸ್‌ಐಟಿ ಮುಂತಾದ ತನಿಖಾ ಸಂಸ್ಥೆಗಳೂ ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರು ಎಂದು ಸಾಬೀತಾದ ಪ್ರಮುಖ ಕುಮಾರಸ್ವಾಮಿಯವರ ಗಣಿ ಹಗರಣ, ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ಅನೇಕ ವಿಷಯಗಳ ಕುಳಿತು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ ಎಂದರು