ಬೆಳವಡಿ ಗ್ರಾಮದಲ್ಲಿ ಅತಿಯಾದ ಮಳೆಯಿಂದ ಜಲಾವೃತ – ಅಗ್ನಿಶಾಮಕ ಸಿಬ್ಬಂದಿಯಿಂದ 20 ಜನರ ರಕ್ಷಣೆ

ಬೆಳವಡಿ ಗ್ರಾಮದಲ್ಲಿ ಅತಿಯಾದ ಮಳೆಯಿಂದ ಜಲಾವೃತ – ಅಗ್ನಿಶಾಮಕ ಸಿಬ್ಬಂದಿಯಿಂದ 20 ಜನರ ರಕ್ಷಣೆ
ಕಲಬುರಗಿ: ಚಿತ್ತಾಪುರ ತಾಲೂಕಿನ ಬೆಳವಡಿ ಗ್ರಾಮವು ಅತಿಯಾದ ಮಳೆಯಿಂದ ಸಂಪೂರ್ಣವಾಗಿ ಜಲಾವೃತಗೊಂಡ ಹಿನ್ನೆಲೆಯಲ್ಲಿ ಕಲಬುರಗಿ ಅಗ್ನಿಶಾಮಕ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ, ಅಲ್ಲಿ ಸಿಲುಕಿಕೊಂಡಿದ್ದ ಸುಮಾರು 20 ಜನರನ್ನು ರಕ್ಷಣೆ ಮಾಡಿದರು.
ಕಲಬುರಗಿ ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಎಎಸ್‌ಓ ಆಂಜನೇಯ ಹಾಗೂ ಅಗ್ನಿಶಾಮಕ ಸಿಬ್ಬಂದಿಗಳಾದ ಸತೀಶ ಎಲ್ ಎಫ್, ನೈಮೋದಿನ್, ಗಬ್ಬರ್ ಸಿಂಗ್, ಶಂಕರ ಲಿಂಗ, ಮಲ್ಲಪ್ಪ, ಅಮಿತ, ಬಸವರಾಜ, ಶಂಭುಲಿಂಗಪ್ಪ ಮತ್ತು ರಾಮಜಿ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿದರು.
ಸ್ಥಳೀಯ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮನವಿ ಮಾಡಲಾಗಿದ್ದು, ಯಾವುದೇ ಅವಘಡಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.