ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ 99ನೇ ವಾರ್ಷಿಕ ಮಹಾಸಭೆ – ಅತ್ಯುತ್ತಮ ಸಾಧಕರಿಗೆ ಪ್ರಶಸ್ತಿ ಪ್ರದಾನ

ಕಲಬುರಗಿ: ನಗರದ ಕೋಸಗಿ ಕಲ್ಯಾಣ ಮಂಟಪದಲ್ಲಿ ಕಲಬುರಗಿ ಮತ್ತು ಯಾದಗಿರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಕಲಬುರಗಿಯ 99ನೇ ವಾರ್ಷಿಕ ಮಹಾಸಭೆ ವಿಜೃಂಭಣೆಯಿಂದ ಜರುಗಿತು. 2024-25ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಕವಲಗಾ (ಬಿ) ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಅಧ್ಯಕ್ಷ ಚಂದ್ರಕಾಂತ ದಶರಥ ತಳವಾರ ಹಾಗೂ ಕಾರ್ಯದರ್ಶಿ ಅವಣ್ಣ ನಡುವಿನಮನಿ ಅವರಿಗೆ ಪ್ರಶಸ್ತಿ ಪತ್ರ ನೀಡಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಬ್ಯಾಂಕ್ ಅಧ್ಯಕ್ಷ ಸೋಮಶೇಖರ ಗೋನಾಯಕ್, ಉಪಾಧ್ಯಕ್ಷರು, ಕಾರ್ಯದರ್ಶಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಗಣ್ಯರು, ಸಹಕಾರ ಚಳವಳಿ ಗ್ರಾಮೀಣ ಆರ್ಥಿಕತೆಗೆ ಬುನಾದಿ ಹಾಕಿದ್ದು, ಕೃಷಿಕರ ಹಿತಾಸಕ್ತಿ ಕಾಪಾಡಲು ಸಹಕಾರಿ ಸಂಘಗಳು ಮುಂದಾಳತ್ವ ವಹಿಸುತ್ತಿರುವುದನ್ನು ಮೆಚ್ಚಿದರು.

--