ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ – ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ...?

ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಆಯ್ಕೆ – ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ...?
ಕಲಬುರಗಿ : ರಾಜ್ಯಮಟ್ಟದ ಶಿಕ್ಷಕರ ಪ್ರಶಸ್ತಿಗೆ ಕಲ್ಯಾಣ ಕರ್ನಾಟಕ ವಿಭಾಗದಿಂದ ನಾಲ್ಕೂ ಶಿಕ್ಷಕರು ಆಯ್ಕೆಯಾಗಿದ್ದಾರೆ.
*ಮಹಾಂತೇಶ ಮೇಟಿ, ಬಳ್ಳಾರಿ ಜಿಲ್ಲೆ
* ಲಂಬಾಣಿ ರೆಡ್ಡಿ ನಾಯಕ, ಮತ್ತು ಶಿವನ ನಾಯಕ (ವಿಶೇಷ ಶಿಕ್ಷಕ), ವಿಜಯನಗರ ಜಿಲ್ಲೆ
* ಹಣಮಂತರಾಯ ಸೋಮಾಪೂರ, ಯಾದಗಿರಿ ಜಿಲ್ಲೆ
ಪ್ರಶಸ್ತಿ ಪಟ್ಟಿ ಪ್ರಕಟವಾದ ತಕ್ಷಣ, ಕಲ್ಯಾಣ ಕರ್ನಾಟಕದ ಶಿಕ್ಷಣ ವಲಯದಲ್ಲಿ ಅಸಮಾಧಾನದ ಧ್ವನಿ ಕೇಳಿ ಬರುತ್ತಿದೆ. ಪ್ರತಿಭಾವಂತ ಶಿಕ್ಷಕರ ಕೇಂದ್ರವಾಗಿರುವ ಕಲ್ಯಾಣ ಕರ್ನಾಟಕಕ್ಕೆ ಸರಿಯಾದ ಗೌರವ ಸಿಗುತ್ತಿಲ್ಲ ಎಂಬುದು ಶಿಕ್ಷಕರ ಅಸಮಾಧಾನ
ವಿಶೇಷವಾಗಿ ಕಲಬುರಗಿ ಜಿಲ್ಲೆ ಸಂಪೂರ್ಣವಾಗಿ ಮರೆಯಾಗಿರುವುದು, ಬೆಂಗಳೂರು , ಮೈಸೂರು , ಬೆಳಗಾವಿ ವಲಯಕ್ಕೆ ಹೆಚ್ಚು ಪ್ರಶಸ್ತಿಗಳು ನೀಡಿರುವುದು "ಮಲತಾಯಿ ಧೋರಣೆ" ಎಂದು ಶಿಕ್ಷಕರು ಆರೋಪಿಸಿದ್ದಾರೆ.
12 ನೇ ಶತಮಾನದಲ್ಲಿ ಕನ್ನಡದ ವಚನ ಸಾಹಿತ್ಯ ಕೊಟ್ಟ ಬೀದರ್ ಮತ್ತು ಕಲ್ಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿ ಕಡೆ ಇಲಾಖೆಯ ನಿರ್ಲಕ್ಷ್ಯ ಕಂಡು ಬರುತ್ತಿದೆ ಎಂಬ ಚಿಂತನೆ ವ್ಯಕ್ತವಾಗಿದೆ.
ಈ ಹಿನ್ನೆಲೆಯಲ್ಲಿ ಭವಿಷ್ಯದಲ್ಲಿ ಯಾವುದೇ ತಾರತಮ್ಯವಾಗದಂತೆ ಶಾಲಾ ಶಿಕ್ಷಣ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಶಿಕ್ಷಕ ವಲಯದಿಂದ ಆಗ್ರಹ ವ್ಯಕ್ತವಾಗಿದೆ.