ವಿದ್ಯುತ್ ಕಂಬ ಸ್ಥಳಾಂತರಕ್ಕೆ : ರೈತ ಮುಖಂಡ ಕಾಂತು ಪಾಟೀಲ್ ಆಗ್ರಹ

ವಿದ್ಯುತ್ ಕಂಬ ಸ್ಥಳಾಂತರಕ್ಕೆ : ರೈತ ಮುಖಂಡ ಕಾಂತು ಪಾಟೀಲ್ ಆಗ್ರಹ
ಶಹಾಪುರ : ತಾಲೂಕಿನ ಭೀಮರಾಯನಗುಡಿ ಗೋಗಿ ರಸ್ತೆಯ ಹಿರೇಮಠ್ ಪೆಟ್ರೋಲ್ ಪಂಪ್ ಎದುರುಗಡೆ ಇರುವ ಜಮೀನಿನ ಒಂದರಲ್ಲಿ ವಿದ್ಯುತ್ ಕಂಬ ಸಂಪೂರ್ಣವಾಗಿ ವಾಲಿ ಅಪಾಯಕ್ಕೆ ಆಹ್ವಾನ ನೀಡುತ್ತಿದೆ, ಕೂಡಲೇ ಇದನ್ನು ಸ್ಥಳಾಂತರಿಸಬೇಕು ಎಂದು ರೈತ ಮುಖಂಡ ಲಕ್ಷ್ಮಿಕಾಂತ್ ಪಾಟೀಲ್ ಮದ್ರಕಿ ಆಗ್ರಹಿಸಿದ್ದಾರೆ.
ರೈತರು ಜಮೀನಿನಲ್ಲಿ ದಿನನಿತ್ಯ ಜೀವ ಕೈಯಲ್ಲಿ ಹಿಡಿದು ಕೆಲಸ ಮಾಡಬೇಕಾಗಿದೆ,ಅಲ್ಲದೆ ವಿದ್ಯುತ್ ತಂತಿ ತಗುಲಿ ಸಾವು ನೋವುಗಳು ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಿದೆ,ಈಗಾಗಲೇ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರು ಪ್ರಯೋಜನಯಾಗಿಲ್ಲ,ಜೆಸ್ಕಾಂ ಅಧಿಕಾರಿಗಳು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.
ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ವಿದ್ಯುತ್ ಕಂಬ ಸ್ಥಳಾಂತರ ಗೊಳಿಸಬೇಕು ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆಗಾರರನ್ನಾಗಿ ಮಾಡಬೇಕಾಗುತ್ತದೆ ಎಂದು ಈ ಮೂಲಕ ಸಾರ್ವಜನಿಕರು ಎಚ್ಚರಿಕೆ ನೀಡಿದ್ದಾರೆ.