ಶಿಕ್ಷಕ ದಿನಾಚರಣೆಗೆ ಮುರಾರ್ಜಿ ವಸತಿ ಶಾಲಾ ಶಿಕ್ಷಕರ ಕಡೆಗಣನೆ - ಮಡಿವಾಳಪ್ಪ ಪಾಟೀಲ್ ವಿರೋಧ

ಶಿಕ್ಷಕ ದಿನಾಚರಣೆಗೆ ಮುರಾರ್ಜಿ ವಸತಿ ಶಾಲಾ ಶಿಕ್ಷಕರ ಕಡೆಗಣನೆ - ಮಡಿವಾಳಪ್ಪ ಪಾಟೀಲ್ ವಿರೋಧ

ಶಿಕ್ಷಕ ದಿನಾಚರಣೆಗೆ ಮುರಾರ್ಜಿ ವಸತಿ ಶಾಲಾ ಶಿಕ್ಷಕರ ಕಡೆಗಣನೆ - ಮಡಿವಾಳಪ್ಪ ಪಾಟೀಲ್ ವಿರೋಧ 

ಶಹಾಪುರ : ತಾಲೂಕಿನ ಭೀಮರಾಯನಗುಡಿ ಕೃಷಿ ಮಹಾವಿದ್ಯಾಲಯದ ಸಭಾಂಗಣದಲ್ಲಿ ಯಾದಗಿರಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಹಮ್ಮಿಕೊಂಡಿರುವ ಜಿಲ್ಲಾಮಟ್ಟದ ಶಿಕ್ಷಕ ದಿನಾಚರಣೆಗೆ ಯಾದಗಿರಿ ಜಿಲ್ಲಾ ಮುರಾರ್ಜಿ ವಸತಿ ಶಾಲೆಗಳ ಶಿಕ್ಷಕರನ್ನು ಕಡೆಗಣಿಸಲಾಗಿದೆ ಎಂದು ವಸತಿ ಶಾಲೆ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಡಿವಾಳಪ್ಪ ಪಾಟೀಲ್ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಗೆ ಸೌಜನ್ಯಕ್ಕಾದರೂ ಆಮಂತ್ರಣ ಪತ್ರಿಕೆ ನೀಡಿಲ್ಲ,ಫೋನ್ ಮಾಡಿದರೂ ಕರೆದಿಲ್ಲ,ಜಿಲ್ಲಾಧ್ಯಕ್ಷರು,ತಾಲೂಕು ಅಧ್ಯಕ್ಷರು,ಶಿಕ್ಷಣ ಇಲಾಖೆ ಅಧಿಕಾರಿಗಳು ಏಕ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಮುಂದಿನ ವರ್ಷದಿಂದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆಗೆ ಹಾಗೂ ಉತ್ತಮ ಶಿಕ್ಷಕ ಪ್ರಶಸ್ತಿಗೆ ವಸತಿ ಶಾಲಾ ಶಿಕ್ಷಕರನ್ನು ಪರಿಗಣಿಸಬೇಕು,ಇಲ್ಲದಿದ್ದರೆ ಉಗ್ರವಾದ ಹೋರಾಟ ಮಾಡಬೇಕಾಗುತ್ತದೆ, ಶಿಕ್ಷಣ ಇಲಾಖೆಯ ಹಿರಿ ಅಧಿಕಾರಿಗಳಿಗೆ ಫೋನ್ ಮಾಡಿದರೆ ಸಂಪರ್ಕಕ್ಕೆ ಸಿಗಲಿಲ್ಲ.