ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರ ಶ್ಲಾಘನೀಯ ಶಶೀಲ್ ಜಿ ನಮೋಶಿ

ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗದಿಂದ ಪಿಯುಸಿ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ಶಿಬಿರ ಶ್ಲಾಘನೀಯ ಶಶೀಲ್ ಜಿ ನಮೋಶಿ
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಭಾಗದಲ್ಲಿ ಪಿಯುಸಿ ದ್ವಿತೀಯ ವರ್ಷದ ಫಲಿತಾಂಶ ಸುಧಾರಣೆಗಾಗಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ ಹಾಗೂ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ಸಂಘಗಳು ಕಾರ್ಯ ನಿರ್ವಹಿಸುತ್ತಿರುವದು ಶ್ಲಾಘನೀಯ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಹೇಳಿದರು
ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸೀರಿ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ವಿಭಾಗ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘ , ಹಾಗೂ ಉಪನ್ಯಾಸಕರ ಸಂಘ ಕಲಬುರ್ಗಿ ಶಾಖೆಯ ಸಹಯೋಗದಲ್ಲಿ ಜರುಗಿದ ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಹಾಗೂ ರಾಜ್ಯ ಶಾಸ್ತ್ರ ವಿಷಯಗಳ ಉಪನ್ಯಾಸಕರಿಗೆ ಫಲಿತಾಂಶ ಸುಧಾರಣೆಗಾಗಿ ಪುನಶ್ಚೇತನ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡುತ್ತಿದ್ದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಫಲಿತಾಂಶ ಕುಸಿಯುತ್ತಿರುವ ದಕ್ಕೆ ಉಪನ್ಯಾಸಕರು ಕಾರಣರಲ್ಲ ಈ ಭಾಗದಲ್ಲಿ ಪೂರ್ಣ ಪ್ರಮಾಣದ ಶಿಕ್ಷಕರ, ಉಪನ್ಯಾಸಕರ ನೇಮಕಾತಿ ಇಲ್ಲದೆ ಇರುವುದು ಕಾರಣವಾಗಿದೆ ಎಂದು ಹೇಳಿದರು
ಈ ಪುನಶ್ಚೇತನ ತರಬೇತಿ ಶಿಬಿರದಲ್ಲಿ ಭಾಗವಹಿಸಿರುವ ವಿಷಯವಾರು ಉಪನ್ಯಾಸಕರು ಇಲ್ಲಿ ತರಬೇತಿ ಪಡೆದು ದೃಡ ಮನಸ್ಸಿನಿಂದ ಕಾರ್ಯ ನಿರ್ವಹಿಸಿ ಈ ಬಾರಿಯ ಫಲಿತಾಂಶ ಸುಧಾರಣೆ ಮಾಡಬೇಕು ಎಂದು ಹೇಳಿದರು. ಫಲಿತಾಂಶ ಸುಧಾರಣೆಗಾಗಿ ನಾನು ಸಹ ನಿಮ್ಮೋಂದಿಗೆ ಸದಾ ಇರುತ್ತೇನೆ ಎಂದು ಹೇಳಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕಾತಿಗೆ ಸರ್ಕಾರ ಕ್ರಮ ವಹಿಸಲು ಈಗಾಗಲೇ ಹಲವಾರು ಬಾರಿ ಒತ್ತಡ ಹೇರಲಾಗಿದೆ, ಬಡ್ತಿ ಮೂಲಕವು ನೇಮಕಾತಿ ಮಾಡಿಕೊಳ್ಳಲು ಒತ್ತಾಯಿಸಲಾಗಿದೆ ಎಂದು ಹೇಳಿದರು. ಇಂದು ನನ್ನ ರಾಜಕೀಯ ಸ್ಥಾನಮಾನಕ್ಕೆ ನೀವೆ ಕಾರಣಿಭೂತರು ಅದಕ್ಕಾಗಿ ನಿಮ್ಮ ಕೆಲಸ ಮಾಡುವುದು ನನ್ನ ಕರ್ತವ್ಯ ಎಂದು ಹೇಳಿದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗ ಕಲಬುರ್ಗಿಯ ಉಪನಿರ್ದೇಶಕರಾದ ಸುರೇಶ್ ಅಕ್ಕಣ್ಣ ವಹಿಸಿದ್ದರು. ಪದವಿಪೂರ್ವ ಕಾಲೇಜಿನ ಕಲಬುರ್ಗಿ ವಿಭಾಗದ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಡಾ ಚಂದ್ರಶೇಖರ ದೊಡಮನಿ, ಕರ್ನಾಟಕ ರಾಜ್ಯ ಪದವಿಪೂರ್ವ ಕಾಲೇಜು ಪ್ರಾಚಾರ್ಯರ ಸಂಘದ ಅಧ್ಯಕ್ಷ ಬಸವರಾಜ ಬಿರಾದಾರ, ಉಪನ್ಯಾಸಕರ ಸಂಘ ಜಿಲ್ಲಾ ಅಧ್ಯಕ್ಷ ಮಲ್ಲಪ್ಪ, ಸಂಘಟಕ ಐ ಕೆ ಪಾಟೀಲ್ ವೇದಿಕೆಯ ಮೇಲೆ ಉಪಸ್ಥಿತರಿದ್ದರು
ಕಾಲೇಜಿನ ಪ್ರಾಚಾರ್ಯ ಡಾ ಮೋಹನ್ ರಾಜ್ ಪತ್ತಾರ ಸ್ವಾಗತಿಸಿದರು ನರಸಪ್ಪ ರಂಗೋಲಿ ನಿರೂಪಿಸಿದರು ಬಸವರಾಜ ಗೋಣಿ ವಂದಿಸಿದರು.