ಕನ್ನಡ ಜಾಗೃತಿ ಸಮಿತಿಗೆ ಬಸವರಾಜ ಶಿಣ್ಣೂರ ನೇಮಕ

ಕನ್ನಡ ಜಾಗೃತಿ ಸಮಿತಿಗೆ ಬಸವರಾಜ ಶಿಣ್ಣೂರ ನೇಮಕ
ಶಹಾಪುರ : ಕರ್ನಾಟಕ ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ,ಕನ್ನಡ ಜಾಗೃತಿ ಸಮಿತಿ ಸದಸ್ಯರನ್ನಾಗಿ ಬಸವರಾಜ ಶಿಣ್ಣೂರ ಅವರನ್ನು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ,ಸರಕಾರದ ಅಧೀನ ಕಾರ್ಯದರ್ಶಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕೆ.ಆರ್.ರಮೇಶ್ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಯಾದಗಿರಿ ಜಿಲ್ಲೆಯ ಆಯಾ ವಿಧಾನಸಭಾ ಮತಕ್ಷೇತ್ರಗಳಿಗೆ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಕನ್ನಡ ಜಾಗೃತಿ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಸಾಹಿತಿ - ಪತ್ರಕರ್ತ ಬಸವರಾಜ ಶಿಣ್ಣೂರ ಅವರನ್ನು ನಾಮನಿರ್ದೇಶನ ಮಾಡಿ ಆದೇಶಿಸಲಾಗಿದೆ.
ನನ್ನನ್ನು ಕನ್ನಡ ಜಾಗೃತಿ ಸಮಿತಿಗೆ ನೇಮಕ ಮಾಡಲು ಕಾರಣಿಭೂತರಾದ,ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪುರ ಹಿರಿಯ ಸಾಹಿತಿ ಡಾ.ಸಿದ್ದರಾಮ ಹೊನಕಲ್,ಪ್ರಗತಿಪರ ಚಿಂತಕರಾದ ಸಿದ್ದಲಿಂಗಣ್ಣ ಆನೆಗುಂದಿ,ಹಿರಿಯ ಸಾಹಿತಿ ಶಿವಣ್ಣ ಇಜೇರಿ,ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ: ರವೀಂದ್ರನಾಥ್ ಹೊಸಮನಿ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.