ಸಾಮಾಜಿಕ ನ್ಯಾಯ ಸಾಧನೆಗಾಗಿ ಹಿಂದುಳಿದ ವರ್ಗಗಳ ರಾಜ್ಯವ್ಯಾಪಿ ಸಮೀಕ್ಷೆ – ಮುಖ್ಯಮಂತ್ರಿ ಸಿದ್ದರಾಮಯ್ಯ
 
                                ಸಾಮಾಜಿಕ ನ್ಯಾಯ ಸಾಧನೆಗಾಗಿ ಹಿಂದುಳಿದ ವರ್ಗಗಳ ರಾಜ್ಯವ್ಯಾಪಿ ಸಮೀಕ್ಷೆ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಸಮಾಜದಲ್ಲಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ಪ್ರತಿಯೊಬ್ಬ ನಾಗರಿಕನಿಗೂ ತಲುಪಿಸುವುದು ಸರ್ಕಾರದ ಪ್ರಧಾನ ಗುರಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯದಾದ್ಯಂತ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ನಿಖರ ಮಾಹಿತಿ ಸಂಗ್ರಹಿಸಲು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು 2025ರ ಸೆಪ್ಟೆಂಬರ್–ಅಕ್ಟೋಬರ್ ತಿಂಗಳಲ್ಲಿ ಸಮೀಕ್ಷೆ ನಡೆಸಲು ತೀರ್ಮಾನಿಸಿದೆ.
ಮುಖ್ಯಮಂತ್ರಿ ಅವರು ಶುಕ್ರವಾರ ನೀಡಿದ ಪತ್ರಿಕಾ ಪ್ರಕಟಣೆಯಲ್ಲಿ, “ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು ಹಾಗೂ ಅವಕಾಶಗಳನ್ನು ಒದಗಿಸುವುದು ಸಂವಿಧಾನದ ಮೂಲಭೂತ ಆಶಯ. ಸಮಾಜದಲ್ಲಿ ಇರುವ ಅಸಮಾನತೆಯನ್ನು ನಿವಾರಿಸಲು ವೈಜ್ಞಾನಿಕ ಅಧ್ಯಯನದ ಅವಶ್ಯಕತೆ ಇದೆ. ಈ ಸಮೀಕ್ಷೆಯ ಮೂಲಕ ವಾಸ್ತವ ಸ್ಥಿತಿಯನ್ನು ಅರಿತು, ಸಮರ್ಥ ನೀತಿಗಳನ್ನು ರೂಪಿಸಲು ಸರ್ಕಾರಕ್ಕೆ ನೆರವಾಗಲಿದೆ” ಎಂದು ಹೇಳಿದರು.
“ಕುಟುಂಬದ ಮುಖ್ಯಸ್ಥರು ಅಥವಾ ಮಾಹಿತಿದಾರರು ಸಮೀಕ್ಷಾಧಿಕಾರಿಗಳಿಗೆ ಪ್ರಾಮಾಣಿಕವಾಗಿ ಉತ್ತರಿಸಿ ನಿಖರವಾದ ಮಾಹಿತಿ ನೀಡಿದರೆ, ಸರ್ಕಾರದ ಸೌಲಭ್ಯಗಳು ಅರ್ಹ ಹಿಂದುಳಿದ ವರ್ಗಗಳಿಗೆ ತಲುಪಿಸಲು ಅನುಕೂಲವಾಗುತ್ತದೆ” ಎಂದು ಅವರು ಮನವಿ ಮಾಡಿದರು.
“ಸಾಮಾಜಿಕ ನ್ಯಾಯ ಸಾಧನೆಗಾಗಿ ನಡೆಸಲಾಗುವ ಈ ಸಮೀಕ್ಷೆಯನ್ನು ಎಲ್ಲರೂ ಸಹಕರಿಸಿ ಯಶಸ್ವಿಗೊಳಿಸಬೇಕು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೋರಿದ್ದಾರೆ.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಸಚಿವ ಶಿವರಾಜ ತಂಗಡಗಿ, ಹಿಂದುಳಿದ ಆಯೋಗದ ಅಧ್ಯಕ್ಷರು ಸೇರಿದಂತೆ ಸಂದೇಶ ನೀಡಿದ್ದಾರೆ.
ಪೂರ್ತಿ ಮಾಹಿತಿಗಾಗಿ ಕೆಳಗಡೆ 147 ಪುಟಗಳ ಪುಸ್ತಕ ಪಿಡಿಎಫ್ ಇದೆ ಲಿಂಕ್ ಮೇಲೆ ಒತ್ತಿ ಮಾಹಿತಿ ಪಡೆಯಬಹುದು (hand book )
 

 kkeditor
                                    kkeditor                                 
                    
                 
                    
                 
                    
                 
                    
                 
                    
                 
                    
                 
                    
                 
    
             
    
             
    
             
    
             
    
             
    
             
    
 
    
 
    
 
    
 
    
 
    
                                        
                                     
    
 
    
