ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ಕಲಬುರಗಿ ಪ್ರವಾಸ

ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ನಿಖಿಲ್  ಕುಮಾರಸ್ವಾಮಿ ಕಲಬುರಗಿ ಪ್ರವಾಸ

ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸಲು ನಿಖಿಲ್ ಕುಮಾರಸ್ವಾಮಿ ಕಲಬುರಗಿ ಪ್ರವಾಸ

ಸೆ. 15 ರಂದು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ

ಕಲಬುರಗಿ: ನೆರೆಹಾನಿ ಪ್ರದೇಶಗಳ ರೈತರು, ಸಂತ್ರಸ್ತರ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಜೆಡಿಎಸ್ ಪಕ್ಷದ ರಾಜ್ಯ ಯುವ ಘಟಕದ ರಾಜ್ಯಧ್ಯಕ್ಷ ನಿಖಿಲ ಕುಮಾರ ಸ್ವಾಮಿ ಅವರು ಸೆ.15 ರಂದು ಕಲಬುರಗಿ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ ಎಂದು ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ತಿಳಿಸಿದ್ದರು.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿರವರು ಈಗಾಗಲೇ ರಚಿಸಿದ್ದಾರೆ.ಈ ತಂಡವು ಸೆ.15 ಕಲಬುರಗಿಗೆ ಭೇಟಿ ನೀಡಲಿದೆ.

ರಾಜ್ಯದ ಕಲ್ಯಾಣ ಕರ್ನಾಟಕ ಜಿಲ್ಲೆಗಳಾದ ಬೀದರ್ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಗೆ ಮತ್ತು ಪ್ರವಾಹಕ್ಕೆ ತುತ್ತಾದ ಪ್ರದೇಶಗಳಲ್ಲಿ ಆಸ್ತಿ-ಪಾಸ್ತಿಗಳಿಗೆ ಉಂಟಾಗಿರುವ ಹಾನಿಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದಿಂದ ಸಮೀಕ್ಷೆ ನಡೆಸಲು ಪಕ್ಷದ ಶಾಸಕರು, ಮಾಜಿ ಶಾಸಕರು ಮತ್ತು ಜಿಲ್ಲಾಧ್ಯಕ್ಷರುಗಳನ್ನು ಒಳಗೊಂಡ ತಂಡ ಕಲಬುರಗಿ ಜಿಲ್ಲೆಗೆ ಭೇಟಿ ನೀಡಿ ವೀಕ್ಷಿಸಲಿದೆ 

ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್ ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ. ರೈತ ವಿರೋಧಿ ಕಾಂಗ್ರೆಸ್ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸಿದೆ ನಿರ್ಲಕ್ಷ್ಯವಹಿಸಿದೆ , ಈ ಹಿನ್ನೆಲೆಯಲ್ಲಿ ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನಮ್ಮ ಪಕ್ಷದ ನಾಯಕರು ನೀಡಲಿದ್ದಾರೆ.

ಈ ತಿಂಗಳಿAದ ಮುಂಗಾರು ಹೆಚ್ಚಾಗಿದೆ. ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ರೈತರು ಬೆಳೆದ ಬೆಳೆಗಳು ಸಂಪೂರ್ಣವಾಗಿ ನಾಶವಾಗಿದೆ. ರಾಜ್ಯದಲ್ಲಿ ದೊಡ್ಡ ಮಟ್ಟದಲ್ಲಿ ಬೆಳೆ ಹಾನಿಯಾಗಿದೆ ಎಂದು ಹೇಳಿದರು.

ತೊಗರಿ ಎಲ್ಲಾ ಬೆಳೆ ನಾಶವಾಗಿದೆ. ಸರ್ಕಾರ, ಸಚಿವರು ತುರ್ತು ಪರಿಹಾರ ನೀಡಿಲ್ಲ. ಆಯಾ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಕೃಷಿ ಸಚಿವರು ಇದ್ದಾರೋ, ಇಲ್ಲವೋ ಅನ್ನೋ ಪ್ರಶ್ನೆ ಉದ್ಬವವಾಗಿದೆ. 266? ಚೀಲದ ಗೊಬ್ಬರ ಇತ್ತು, ಬ್ಲಾಕ್ ಮಾರ್ಕೆಟ್‌ಗೆ ಹೋಗಿ 1000? ಕೊಟ್ಟು ಖರೀದಿ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

*ನಿಖಿಲ ಕುಮಾರ್ ಸ್ಚಾಮಿ ಪ್ರವಾಸ*

ಸೆ. 15 ರಂದು ಬೆಳಿಗ್ಗೆ 11.45 ರಿಂದ 1.30 ಕ್ಕೆ ಕಲಬುರಗಿ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ, ಮಧ್ಯಾಹ್ನ 2 ಗಂಟೆಗೆ ಜೇವರ್ಗಿ ಮತಕ್ಷೇತ್ರದ ಸೊಮನಾಥ ಹಳ್ಳಿಗೆ ಭೇಟಿ ಅತಿವೃಷ್ಠಿಯಿಂದ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ ,

ನಂತರ 3.30 ರಿಂದ 5.30 ರ ವರೆಗೆ ಕಟ್ಟಿ ಸಂಗಾವಿ, ಜೇವರ್ಗಿ ನಗರ, ಅವರಾದ,ಗಂವ್ಹಾರ, ಗ್ರಾಮಕ್ಕೆ ಭೇಟಿ ನೀಡಿ ಅತಿವೃಷ್ಠಿಯಿಂದ ಹಾನಿಯಾದ ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ,

ಸಂಜೆ 6.15 ಕ್ಕೆ ಪತ್ರಿಕಾ ಗೋಷ್ಠಿ ನಡೆಸಲಿದ್ದಾರೆ .ಸೇ.16 ರಂದು ಬೆಳ್ಳಿಗ್ಗೆ 8 ಗಂಟೆಗೆ ಮಹಾದಾಸೋಹಿ ಶ್ರೀ ಶರಣಬಸವೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿಸಿದ್ದರು .

ನೀಖಿಲಕುಮಾರ ಸ್ವಾಮಿ ಅವರೊಂದಿಗೆ ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಖಾಶೆಂಪೂರ್, ಗುರುಮಿಠಕಲ್ ಶಾಸಕರಾದ ಶರಣಗೌಡ ಕಂದಕೂರು,

 ಹಗರಿಬೊಮ್ಮನಹಳ್ಳಿ ಶಾಸಕರಾದ ಕೆ. ನೇಮಿರಾಜ್ ನಾಯ್ಕ, 

ದೇವದುರ್ಗ ಶಾಸಕರಾದ ಶ್ರೀಮತಿ ಕರೆಮ್ಮಾ ಜಿ.ನಾಯ್ಕ,ಮಾಜಿ ಶಾಸಕರಾದ ದೊಡ್ಡಪ್ಪಗೌಡ ಎಸ್.ಪಾಟೀಲ್ ನರೆಬೋಳ ಸೇರಿದಂತೆ ಮಾಜಿ ಶಾಸಕರು ,ಪಕ್ಷದ ಮುಖಂಡರು ತಂಡದಲ್ಲಿದ್ದಾರೆ ಎಂದು ತಿಳಿಸಿದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ಕಲ್ಯಾಣ ಕರ್ನಾಟಕ ಉತ್ಸವಕ್ಕೆ ಜಿಲ್ಲೆಗೆ ಆಗಮಿಸುತ್ತಿದ್ದು, ಈ ಭೇಟಿ ವೇಳೆ ರೈತರ ಹೊಲಗಳಿಗೆ ಭೇಟಿ ನೀಡಿ ರೈತರಿಗೆ ವಿಶೇಷ ಪ್ಯಾಕೆಜ್ ಪರಿಹಾರ ಘೋಷಿಸಬೇಕು.

ಬಾಲರಾಜ್ ಗುತ್ತೇದಾರ,ಜಿಲ್ಲಾಧ್ಯಕ್ಷರು ಜೆಡಿಎಸ್ ಕಲಬುರಗಿ