ಕಲಬುರಗಿ: ಅನನ್ಯ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಸಮಾರಂಭ

ಕಲಬುರಗಿ: ಅನನ್ಯ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಸಮಾರಂಭ

ಕಲಬುರಗಿ: ಅನನ್ಯ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ ಸಮಾರಂಭ

ನಗರದ ಅನನ್ಯ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಸಾಹಿತಿ ಶರಣಬಸಪ್ಪ ವಡ್ಡನಕೇರಿ ಉದ್ಘಾಟಿಸಿದರು.

ಸಮಾಜ ಸೇವಕಿ ರೇಣುಕಾ ಹೋರಕೇರಿ, ಹಂಶಿಕಾ ಎಜುಕೇಷನಲ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷೆ ಸುಷ್ಮಾವತಿ ಹೋನ್ನಗೆಜ್ಜೆ, ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ್ ಯಡ್ರಾಮಿ, ನಿವೃತ್ತ ಪ್ರಾಚಾರ್ಯ ಡಾ. ಪಿ. ಎಸ್. ಕೊಕಟನೊರ, ಕಾಲೇಜಿನ ಪ್ರಾಂಶುಪಾಲ ಡಾ. ಶರಣು ಬಿ. ಹೋನ್ನಗೆಜ್ಜಿ, ಡಿಡಿಯು ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಮಲ್ಲಿಕಾರ್ಜುನ ಮೇಟಿ, ಸಮಾಜ ಸೇವಕ ಹುಲಗಪ್ಪ ನಂದ್ಯಾಳ, ರಾಷ್ಟ್ರೀಯ ಸಮಾಜ ಪಕ್ಷದ ರಾಜ್ಯಾಧ್ಯಕ್ಷ ದೇವೇಂದ್ರ ಚಿಗರಳ್ಳಿ, ಸಮಾಜ ಸೇವಕ ಶಿವಕುಮಾರ್ ಪಲ್ಲಾಪುರ ಹಾಗೂ ಪ್ರದೀಪ್ ಕುಮಾರ್ ಕಳ್ಳಿಮನಿ ವಿಶೇಷ ಅತಿಥಿಗಳಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಆಶೀರ್ವಾದದ ಸಂದೇಶ ನೀಡಿದರು.

ಈ ಸಂದರ್ಭದಲ್ಲಿ ಅನನ್ಯ ಪದವಿ ಕಾಲೇಜಿನ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು.