ಸೂರ್ಯಕಾಂತ್ ಬಿ.ಕೆ ಉತ್ತಮ ಶಿಕ್ಷಕರಾಗಿ ಆಯ್ಕೆ – ಶಾಸಕ ಬಿ.ಆರ್. ಪಾಟೀಲರಿಂದ ಪ್ರಶಸ್ತಿ ಪ್ರದಾನ

ಸೂರ್ಯಕಾಂತ್ ಬಿ.ಕೆ ಉತ್ತಮ ಶಿಕ್ಷಕರಾಗಿ ಆಯ್ಕೆ – ಶಾಸಕ ಬಿ.ಆರ್. ಪಾಟೀಲರಿಂದ ಪ್ರಶಸ್ತಿ ಪ್ರದಾನ
ಶಿಕ್ಷಕರ ದಿನಾಚರಣೆಯ ಅಂಗವಾಗಿ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ಆಳಂದ: ಪ್ರತಿ ವರ್ಷದಂತೆ ಈ ಬಾರಿಯೂ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಣ ಇಲಾಖೆಯಿಂದ ತಾಲೂಕು ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಳನ್ನು ವಿತರಿಸಲಾಯಿತು. 2025-26 ನೇ ಸಾಲಿನ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಧುತ್ತರಗಾಂವ ಸರ್ಕಾರಿ ಕಿರಿಯ ಪ್ರೌಢಶಾಲೆಯ ಶಿಕ್ಷಕರಾದ **ಸೂರ್ಯಕಾಂತ್ ಬಿ.ಕೆ** ಅವರು ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಶಾಸಕ **ಬಿ. ಆರ್. ಪಾಟೀಲ** ಅವರು ಸೂರ್ಯಕಾಂತ್ ಬಿ.ಕೆ ಅವರಿಗೆ ತಾಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ಕರ್ನಾಟಕ ಸರ್ಕಾರ, ಕಲಬುರಗಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು, ಕರ್ನಾಟಕ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಆಳಂದ ಇವರ ಸಹಯೋಗದಲ್ಲಿ ಈ ಪ್ರಶಸ್ತಿ ವಿತರಣೆಯು ನೆರವೇರಿತು.
ಶಿಕ್ಷಕರ ಪ್ರಶಸ್ತಿಗೆ ಭಾಜನರಾದ ಆತ್ಮೀಯ **ಸೂರ್ಯಕಾಂತ್ ಬಿ.ಕೆ** ಅವರಿಗೆ ಜಗದೀಶ ಪಾಟೀಲ ಸಣ್ಣೂರ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.