ವಿದ್ಯಾರ್ಥಿಗಳು ಕೌಶಲ್ಯ ತರಬೇತಿ ಪಡೆಯುವದು ಅವಶ್ಯಕ: ಡಾ. ನಾಗಶೆಟ್ಟಿ

ವಿದ್ಯಾರ್ಥಿಗಳು ಕೌಶಲ್ಯ ತರಬೇತಿ ಪಡೆಯುವದು ಅವಶ್ಯಕ: ಡಾ. ನಾಗಶೆಟ್ಟಿ
ಕಲಬುರಗಿ: ಇಂದಿನ ತಾಂತ್ರಿಕ ಮತ್ತು ಡಿಜಿಟಲ್ ಯುಗದಲ್ಲಿ ವಿದ್ಯಾರ್ಥಿಗಳು ಕೌಶಲ್ಯ ಯುಕ್ತ ತರಬೇತಿ ಪಡೆಯುವದು ಅವಶ್ಯಕ ಎಂದು ಗೋದುತಾಯಿ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕಿ ಡಾ. ಸುಂದರಾಬಾಯಿ ನಾಗಶೆಟ್ಟಿ ಅವರು ನುಡಿದರು.
ನಗರದ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಶಿಕ್ಷಣ ವಿಭಾಗದ ವತಿಯಿಂದ ಹಮ್ಮಿಕೊಂಡ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.
ಮುಂದುವರೆದು ಆಧುನಿಕ ಯುಗದಲ್ಲಿ ಡಿಜಿಟಲ್ ಶಿಕ್ಷಣಕ್ಕೆ ಹೆಚ್ಚು ಹೆಚ್ಚು ಮಹತ್ವ ಬಂದಿರುವುದರಿಂದ ವಿದ್ಯಾರ್ಥಿಗಳು ಡಿಜಿಟಲ್ ಶಿಕ್ಷಣ ಪಡೆದುಕೊಳ್ಳ ಬೇಕು ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾವಿದ್ಯಾಲಯದ ಉಪ ಪ್ರಾಚಾರ್ಯರಾದ ಪ್ರೊ ವೀಣಾ ಎಚ್ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಾ ಅಂತರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಮಹತ್ವದ ಕುರಿತು ತಿಳಿ ಹೇಳಿದರು.
ಇದೆ ಸಂದರ್ಭದಲ್ಲಿ ಸಾಕ್ಷರತಾ ದಿನದ ಕುರಿತು ಕಿರು ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತು, ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಿಕ್ಷಣ ವಿಭಾಗದ ಮುಖ್ಯಸ್ಥರಾದ ಡಾ ನಾಗರತ್ನ ಎಸ್ ಅವರು ಅತಿಥಿಗಳಿಗೆ ಸ್ವಾಗತ ಕೋರುತ್ತಾ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕು. ಐಶ್ವರ್ಯ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಶಿವಲೀಲಾ ಅವರು ವಂದಿಸಿದರು.
ಕಾರ್ಯಕ್ರಮದಲ್ಲಿ ಡಾ. ಶ್ರೀದೇವಿ ಸರಡಗಿ, ಶಿವಲೀಲಾ ಧೋತರೆ, ಗೀತಾ ಪಾಟೀಲ, ಸುಷ್ಮಾ ಕುಲಕರ್ಣಿ ಹಾಗೂ ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.