ಬಿಳವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ

ಬಿಳವಾರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ
ಯಡ್ರಾಮಿ ತಾಲೂಕಿನ ಸರ್ಕಾರಿ ಪ್ರೌಢಶಾಲೆ ಬಿಳವಾರದಲ್ಲಿ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯ ಅಂಗವಾಗಿ ಭವ್ಯ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಶಾಲೆಯ ಮುಖ್ಯಗುರು ಮುದುಕಪ್ಪ ಸರ್ ಧ್ವಜಾರೋಹಣ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಸರಕಾರಿ ಶಿಕ್ಷಕರ ಸಂಘದ ರಾಜ್ಯ ವಿಭಾಗಿಯ ಉಪಾಧ್ಯಕ್ಷ ನಿಜಲಿಂಗಪ್ಪ ಮಾನ್ವಿ, ಬಸವರಾಜ್ , ಭೀಮರಾಯ್ , ನಿಂಗಣ್ಣ , ಶರಣಪ್ಪ ಸೇರಿದಂತೆ ಶಿಕ್ಷಕಿಯರಾದ ಶ್ರೀಮತಿ ಅನ್ನಪೂರ್ಣ, ಶ್ರೀಮತಿ ಶ್ರೀದೇವಿ ಹಾಗೂ ಶ್ರೀಮತಿ ಮಹಾಲಕ್ಷ್ಮಿ ಭಾಗವಹಿಸಿದ್ದರು.
ಅದೇ ರೀತಿ ಎಸ್‌ಡಿಎಂಸಿ ಅಧ್ಯಕ್ಷ ಮೈದಾನ ಪಟೇಲ್ ಅಂಕಲಗಿ, ಸಮಾಜಸೇವಕ ರಮೇಶ್ ಗುತ್ತೇದಾರ ಹಾಗೂ ಕಾಂಗ್ರೆಸ್ ಮುಖಂಡ ಹಸನ್ ಪಟೇಲ್ ಬಿಳವಾರ ಅವರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು.
– ವರದಿ: ಜಟ್ಟಪ್ಪ ಎಸ್. ಪೂಜಾರ