ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ

ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ
ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ

ಬಸವೇಶ್ವರ ಆಸ್ಪತ್ರೆಯಲ್ಲಿ ಸ್ವಸ್ತ ನಾರಿ,ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ

ಕಲಬುರ್ಗಿ ಸೆ 17: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಧಾನ ಮಂತ್ರಿ ಮಾತೃ ವಂದನ ಯೋಜನೆಯಡಿಯಲ್ಲಿ ಸ್ವಸ್ಥ ನಾರಿ ಸಶಕ್ತ ಪರಿವಾರ ಅಭಿಯಾನ ಉದ್ಘಾಟನೆ ನೇರವೇರಿಸಿಸಲಾಯಿತು.

ಈ ಅಭಿಯಾನವು ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 2025 ರವರೆಗೆ ನಡೆಯಲಿದ್ದು ಈ ಅಭಿಯಾನದ ಉದ್ದೇಶ ತಾಯಿ ಮತ್ತು ಮಗುವಿನ ಆರೋಗ್ಯ ಉತ್ತೇಜಿಸುವುದು,ಹಾಗೂ ಕುಟುಂಬದ ಯೋಗಕ್ಷೇಮವನ್ನು ಹೆಚ್ಚಿಸುವ ದಾಗಿದೆ.ಮತ್ತು ಕೇಂದ್ರ ಸರ್ಕಾರದ ಯೋಜನೆಯಡಿ ಮಹಿಳೆಯರ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡುವ ಗುರಿಯನ್ನು ಹೊಂದಿದೆ 

ಈ ಅಭಿಯಾನವನ್ನು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಮಹಾವಿದ್ಯಾಲಯದ ಸಂಚಾಲಕರಾದ ಡಾ ಶರಣಬಸಪ್ಪ ಹರವಾಳ ಹಾಗೂ ಡಾ ಶರಣ ಕಾರ್ಭಾರಿ ಉಧ್ಘಾಟಿಸಿದರು. ಈ ಅಭಿಯಾನದ ಕಾರ್ಯಕ್ರಮದ ಉದ್ಘಾಟನೆ ಸಮಾರಂಭದಲ್ಲಿ ಮಹಾದೇವಪ್ಪ ವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ ಶರಣಗೌಡ ಪಾಟೀಲ್,ವೈಸ್ ಡೀನ್ ಡಾ ವಿಜಯಕುಮಾರ್ ಕಪ್ಪಿಕೇರಿ, ವೈದ್ಯಕೀಯ ಅಧೀಕ್ಷಕರಾದ ಡಾ ಮಲ್ಲಿಕಾರ್ಜುನ ತೇಗನೂರ, ನಿರ್ದೇಶಕರಾದ ಡಾ ಮಲ್ಲಿಕಾರ್ಜುನ ಭಂಡಾರ, ಆಡಳಿತಾಧಿಕಾರಿ ಡಾ ಮಾಣಿಕ್ ಪೂಜಾರಿ, ಅಭಿಯಾನದ ನೋಡಲ್ ಅಧಿಕಾರಿ ಡಾ ಸುನೀಲ್ ದೇಶಮುಖ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ ಕೆ ಪಾಟೀಲ್ ತಿಳಿಸಿದ್ದಾರೆ