ತ್ಯಾಗ ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ : ಮನೋಜ ಹಿರೇಮಠ

ಭಾಗಿರಥಿ ಪಬ್ಲಿಕ್ ಶಾಲೆಯಲ್ಲಿ ಕಕವಿ- ವಿಶ್ವಕರ್ಮ ದಿನ ಆಚರಣೆ,
ತ್ಯಾಗ ಬಲಿದಾನದ ಪ್ರತೀಕ ಕಲ್ಯಾಣ ಕರ್ನಾಟಕ ಉತ್ಸವ : ಮನೋಜ ಹಿರೇಮಠ
ಕಮಲನಗರ: ಹೈದರಾಬಾದ್ ನಿಜಾಮನ ದಬ್ಬಾಳಿಕೆ ವಿರುದ್ಧ ನಡೆದ ಹೋರಾಟ ನೂರಾರು ಜನರ ತ್ಯಾಗ, ಬಲಿದಾನದ ಪ್ರತೀಕವಾಗಿದೆ. ಈ ಕಲ್ಯಾಣ ಕರ್ನಾಟಕ ಉತ್ಸವ ಎಂದು ಮುಖ್ಯ ಶಿಕ್ಷಕ ಮನೋಜಕುಮಾರ ಹಿರೇಮಠ ಹೇಳಿದರು.
ಪಟ್ಟಣದ ಭಾಗಿರಥಿ ಪಬ್ಲಿಕ್ ಶಾಲೆಯಲ್ಲಿ ಬುಧವಾರ ಕಲ್ಯಾಣ ಕರ್ನಾಟಕ ಉತ್ಸವ ಮತ್ತು ವಿಶ್ವಕರ್ಮ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಜನರು ಮೊದಲು ಬ್ರಿಟಿಷರ ವಿರುದ್ಧ ಹೋರಾಡಿದರೇ, ನಂತರ ನಮ್ಮದೇ ದೇಶದ ಹೈದರಾಬಾದ್ ನಿಜಾಮನ ವಿರುದ್ಧ ಹೋರಾಡಿ ಸ್ವಾತಂತ್ರ್ಯ ಪಡೆಯಬೇಕಾಯಿತು. ಕಲ್ಯಾಣ ಕರ್ನಾಟಕ ಸೇರಿದಂತೆ ಹೈದರಾಬಾದ್ ಪ್ರಾಂತ್ಯಕ್ಕೆ ಸ್ವಾತಂತ್ರ್ಯ ಸಿಗಲು ಕಾರಣೀಭೂತರಾಗಿದ್ದು, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲರು ಎಂದರು.
ಡಾ. ಅಜಿತಕುಮಾರ ಶಾಸ್ತ್ರೀ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅವರು ಭಾವಚಿತ್ರಗಳಿಗೆ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ವಿಶ್ವಕರ್ಮ ದೇವತೆಗಳಿಗೆ ಆಯುಧಗಳು, ರಥಗಳನ್ನು ವಿನ್ಯಾಸಗೊಳಿಸಿದ ಆದಿಗುರು. ಇವರನ್ನು ಪೂಜಿಸುವುದರಿಂದ ಕೆಲಸದಲ್ಲಿ ಸಮೃದ್ಧಿ ಮತ್ತು ಯಶಸ್ಸು ಸಿಗುತ್ತದೆ ಎಂದು ನಂಬಲಾಗಿದೆ ಎಂದು ಹೇಳಿದರು.
ಶಿಕ್ಷಕಿ ಶ್ರೀದೇವಿ ಸೋನಕಾಂಬಳೆ, ಸಂಗೀತಾ ಕಾಂಬಳೆ, ದೀಪಮಾಲಾ ಸೂರ್ಯವಂಶಿ, ರಾಜಶ್ರೀ ಸಿರಗಿರೆ, ಶೀತಲ ಹಂಗರಗೆ, ಅಚಿಜಲಿ ಕಾಂಬಳೆ, ಅಂಬಿಕಾ ಗಾಯಕವಾಡ್, ಮಲ್ಲಿಕಾರ್ಜುನ ಮೇತ್ರೆ, ಪಂಚಫುಲಾ, ಅಶ್ವೀನಿ ಮನೋಜ ಹಾಗೂ ಮಕ್ಕಳು ಇದ್ದರು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಅಭಿಜೀತ ಜಗನ್ನಾಥ, ಅರ್ಪಿತಾ, ಶೀತಲ ಮೊದಲಾದವರು ಕಲ್ಯಾಣ ಕರ್ನಾಟಕ ಉತ್ಸವ ಕುರಿತು ಭಾಷಣ ಮಾಡಿದರು.