ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೆ.ಕೆ.ಆರ್.ಡಿ.ಬಿ. ಯಿಂದ ಮೂಲಭೂತ ಸೌಲಭ್ಯಗಳಿಗೆ ಅನುದಾನ ನೀಡುವಂತೆ ಸಿಎಂಗೆ ಮನವಿ
                                ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೆ.ಕೆ.ಆರ್.ಡಿ.ಬಿ. ಯಿಂದ ಮೂಲಭೂತ ಸೌಲಭ್ಯಗಳಿಗೆ ಅನುದಾನ ನೀಡುವಂತೆ ಸಿಎಂಗೆ ಮನವಿ
ಕಲಬುರಗಿ: ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನಕ್ಕೊಳಪಡಿಸುಮತೆ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕೆ.ಕೆ.ಆರ್.ಡಿ.ಬಿ. ಯಿಂದ ಮೂಲಭೂತ ಸೌಲಭ್ಯಗಳಿಗೆ ಅನುದಾನ ನೀಡುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಕಲ್ಯಾಣ ಕರ್ನಾಟಕ ವಿಭಾಗೀಯ ಖಾಸಗಿ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದಿಂದ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಪ್ರಗತಿಯಲ್ಲಿ ಖಾಸಗೀ ಶಿಕ್ಷಣ ಸಂಸ್ಥೆಗಳ ಪಾತ್ರ ಬಹುಮುಖ್ಯವಾಗಿದೆ, ಈ ಭಾಗದ ಕನ್ನಡ ಮಾಧ್ಯಮ ಶಾಲೆಗಳು ಅಳಿವಿನಂಚಿನಲ್ಲಿವೆ, ಅದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿವರ್ಗ ಅನುದಾನಕ್ಕಾಗಿ ಜಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ. ಅದರಲ್ಲಿ ಬಹುತೇಕರ ವಯಸ್ಸು ಸೇವಾ ಅವಧಿ ಮುಗಿಯುತ್ತಿದೆ. ಆದಕರಣ ಕನ್ನಡ ಮಾಧ್ಯಮ ಶಾಲೆಗಳ ಮತ್ತು ಸಿಬ್ಬಂದಿಯವರ ಉಳಿವಿಗಾಗಿ ತಾವುಗಳು ಅನುದಾನ ಕ್ಕೊಳಪಡಿಸಬೇಕೆಂದು.
ಈ ಭಾಗದ ಅಭಿವೃದ್ಧಿಗಾಗಿ 371ಜೆಅಡಿಯಲ್ಲಿ ಕೆ.ಕೆ.ಆರ್.ಡಿ.ಬಿ. ಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಮೂಲಭೂತ ಸೌಲಭ್ಯಗಳಿಗೆ ಮತ್ತು ಈ ಭಾಗದ ಕನ್ನಡ ಮಾಧ್ಯಮ ಶಾಲೆಗಳಿಗೆ ವೇತನಾನುದಾನವನ್ನು ನೀಡಬೆಕೆಂದು, 1995ರ ನಂತರದ ಕನ್ನಡ ಮಾಧ್ಯಮ ಶಾಲೆಗಳನ್ನು ವೇತನಾನುದಾನಕ್ಕೊಲ ಪಡಿಸಬೇಕು, 371ಜೆ ಅಡಿಯಲ್ಲಿ ಕೆ.ಕೆ.ಆರ್.ಡಿ.ಬಿ. ಯಿಂದ ಖಾಸಗಿ ಶಿಕ್ಷಣ ಸಂಸ್ಥೆಗಳಿಗೂ ಮೂಲಭೂತ ಸೌಲಭ್ಯಗಳಿಗೆ ಅನುದಾನ ನೀಡಬೇಕು, ಖಾಸಗಿ ಶಾಲೆಗಳ ನವೀಕರಣಕ್ಕೆ ವಿಧಿಸಿದ ನಿಬಂಧನೆಗಳನ್ನು ಸರಳೀಕರಣಗೊಳಿಸಬೇಕು, ಸುಪ್ರೀಂಕೋರ್ಟನ ಆದೇಶದಂತೆ 15 ಮೀಟರ್ ವರೆಗಿನ ಶಾಲಾಕಟ್ಟಡಗಳಿಗೆ ಅಗ್ನಿಶಾಮಕ ಪ್ರಮಾಣ ಪತ್ರ ಪಡೆಯುವುದಕ್ಕೆ ವಿನಾಯತಿ ನೀಡಬೇಕು, ಭೂ ಪರಿವರ್ತನೆ ನಿಯಮ ಸಡಿಲಗೊಳಿಸಿ, ಸ್ಥಳೀಯ ಸಂಸ್ಥೆಗಳು ನೀಡುವ ಬಿ ಖಾತೆಯಿದ್ದರೂ ಶಾಲೆಗಳ ನವೀಕರಣಕ್ಕೆ ಶಿಕ್ಷಣ ಇಲಾಖೆ ಅನುಮತಿ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ರೇವಣಸಿದ್ದಪ್ಪ ಜಲಾದ, ಬಾಬುರಾವ ಸುಳ್ಳದ, ಮಲ್ಲಿಕಾರ್ಜುನ ಮಾಳಿ, ಅರುಣಕುಮಾರ ಪಾಟೀಲ ಇದ್ದರು
.
