ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಬಸವಲಿಂಗ ನಗರದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ

ಕಲಬುರಗಿ: ಶಹಾಬಜಾರ ಬಸವಲಿಂಗ ನಗರದ ಕರ್ನಾಟಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಭಾವಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಣ ಹೊಸಮನಿ ಅವರು ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಪೂರ್ಣಿಮಾ, ಉಮೇಶ್ ವಾಲಿಕರ್, ರುಕ್ಕಪ್ಪ ಕಾಂಬಳೆ ಹಾಗೂ ಜೈರಾಜ್ ಕಿಣಗಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಉತ್ಸವದ ಅಂಗವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದೇಶಭಕ್ತಿ ಗೀತೆಗಳನ್ನು ಹಾಡಿದರು.