ರಸ್ತೆ ಗುಂಡಿಗಳನ್ನು ಮುಚ್ಚಲು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

ರಸ್ತೆ ಗುಂಡಿಗಳನ್ನು ಮುಚ್ಚಲು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

ರಸ್ತೆ ಗುಂಡಿಗಳನ್ನು ಮುಚ್ಚಲು ಒತ್ತಾಯಿಸಿ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ

ಕಲಬುರಗಿ: ಗುಂಡಿಗಳು ತುಂಬಿರುವುದರಿoದ ವಾಹನ ಸಂಚಾರಕ್ಕೆ ತೊಂದರೆಯಾಗಿರುವ ನಗರದ ಎಂ.ಜಿ ರಸ್ತೆ ದುರಸ್ಥಿಗೆ ಒತ್ತಾಯಿಸಿ ವೆಲ್ಪಾಫೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.

ಕಲಬುರ್ಗಿ ಮಹಾನಗರ ಪಾಲಿಕೆ ಹೆಸರಿನಲ್ಲಿ ಬಂದಿರುವ ಸಾವಿರಾರು ಕೋಟಿ ಹಣ ವ್ಯರ್ಥವಾಗಿದ್ದು ನಗರವನ್ನು ಪ್ರವೇಶಿಸುವ ಮುಖ್ಯರಸ್ತೆಯನ್ನೇ ನಿರ್ಲಕ್ಷಿಸಲಾಗಿದೆ. ಗುಂಡಿಗಳಿಂದ ಅಪಘಾತ ಸಂಭವಿಸಿದರೆ ಪಾಲಿಕೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಎಲ್ಲಾ ವಾರ್ಡಿನ ರಸ್ತೆಗಳಲ್ಲಿ ಬೃಹತ್ ಗಾತ್ರದ ಗುಂಡಿಗಳಿವೆ ಇದನ್ನು ಸಂಪೂರ್ಣವಾಗಿ ಜನಪ್ರತಿನಿಧಿಗಳು ಜವಾಬ್ದಾರಿ ಮರೆತಿದ್ದಾರೆ. ಅಧಿಕಾರಿಗಳು ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ. ಇದರಿಂದಾಗಿ ದಿನನಿತ್ಯ ಓಡಾಡುವವರ ಸಂಕಟ ಹೇಳತೀರದಂತಾಗಿದೆ. ರಸ್ತೆಗಳಲ್ಲಿ ಕಾಣಿಸುತ್ತಿರುವ ದೊಡ್ಡ ದೊಡ್ಡ ಗುಂಡಿಗಳಿಗೆ ಬಿದ್ದು ವಾಹನಗಳು ಹಾಳಾಗುತ್ತಿವೆ. ಕೈಕಾಲುಗಳು ಮುರಿಯುತ್ತಿವೆ ಎಂದು ಅವರು ಹೇಳಿದರು. 

ಮಹಾನಗರ ಪಾಲಿಕೆಯ ವ್ಯಾಪ್ತಿಯ ಎಲ್ಲಾ ಗುಂಡಿಗಳು ಹಾಗೂ ರಸ್ತೆ ದುರಸ್ತಿಗೆ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ನಗರದ ಇಬ್ಬರು ಶಾಸಕರು, ಮಹಾನಗರ ಪಾಲಿಕೆ ಮುಂದಾಗಬೇಕು ಇಲ್ಲವಾದರೆ ವೆಲೇರ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ತೀವ್ರವಾದಹೋರಾಟವನ್ನು ನಡೆಸಲಾಗುವುದು ಈ ಮೂಲಕ ಎಚ್ಚರಿಸುತ್ತೇವೆ.

ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮೊಬಿನ್ ಅಹಮ್ಮದ್, ಜಿಲ್ಲಾ ಅಧ್ಯಕ್ಷ ,ಸಲೀಮ್ ಅಹಮ್ಮದ್ ಚಿತಾಪುರಿ, ಸಲೀಮ್ ಸಗರಿ, ಅಬ್ದುಲ್ ಬಾರಿ ತಾಜುದ್ದೀನ್ ಸೇರಿದಂತೆ ಇತರರು ಇದ್ದರು.