ಹೈ.ಕ. ಪ್ರದೇಶ ವಾಲ್ಮೀಕಿ ನಾಯಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ಹೈ.ಕ. ಪ್ರದೇಶ ವಾಲ್ಮೀಕಿ ನಾಯಕರ ಸಂಘದಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ಹೈ.ಕ.ಪ್ರದೇಶ ವಾಲ್ಮೀಕಿ ನಾಯಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ

ಕಲಬುರಗಿ: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಪಂಗಡದ ನಾಯಕ ತಳವಾರ ಹೆಸರಿನಲ್ಲಿ ಪ್ರವರ್ಗ-1 ರಲ್ಲಿರುವ ಬೇರೆ ಸಮುದಾಯದವರು ಅಕ್ರಮವಾಗಿ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ಮತ್ತು ಸಿಂಧುತ್ವ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ವಂಚಿಸುತ್ತಿರುವ ಹಾಗೂ ಬಲಾಢ್ಯ ಸಮುದಾಯದವರನ್ನು ಎಸ್.ಟಿ ಪಟ್ಟಿಗೆ ಸೇರಿಸುತ್ತಿರುವುದರ ಕುರಿತು. ಹೈ.ಕ.ಪ್ರದೇಶ ವಾಲ್ಮೀಕಿ ನಾಯಕರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.

ಭಾರತ ಸಂವಿಧಾನ ಪರಿಚ್ಚೇಧ 341 ಮತ್ತು 342ರಡಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಅನೇಕ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ 1950 ಮತ್ತು ಅದರ ನಂತರ ಹೊರಡಿಸಿರುವ ಅಧಿಸೂಚನೆಗಳಡಿ ಮೀಸಲಾತಿ ನೀಡಿ ಅವಕಾಶಗಳನ್ನು ಒದಗಿಸಿರುವುದು ಸರಿಯಷ್ಟೆ. ಆದರೆ ದೇಶಕ್ಕೆ ಸ್ವಾತಂತ್ರö್ಯ ಬಂದು 7 ದಶಕಗಳು ಕಳೆಯುತ್ತಾ ಬಂದರೂ ಪರಿಶಿಷ್ಟ ಪಂಗಡದವರ ಮೇಲೆ ನಿರಂತರ ಶೋಷಣೆ, ದಬ್ಬಾಲಿಕೆ, ದೌರ್ಜನ್ಯಗಳು ಮತ್ತು ಮೀಸಲಾತಿಯ ವಂಚನೆಯ ಪ್ರಕರಣಗಳು ಹೆಚ್ಚಾಗುತ್ತಿರುವುದು ಖಂಡನೀಯ. ಇಂದು ಭಾರತೀಯ ಸಂಸ್ಕೃತಿಗೆ ಮಾನವೀಯ ಮೌಲ್ಯಗಳನ್ನು ಜಗತ್ತಿಗೇ ಸಾರಿದ ಆದಿಕವಿ ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ಹಾಗೂ ಭಾರತದ ಶೋಷಿತ ಸಮುದಾಯಗಳ ಧ್ವನಿ, ಮಹಾ ಮಾನವತವಾದಿ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಬಿ.ಆರ್.ಅಂಬೇಡ್ಕರ್‌ರವರ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಸಂವಿಧಾನದ ಹಕ್ಕುಗಳನ್ನು ಪಡೆಯಲು ಸಾಂಘಿಕವಾಗಿ ಒಟ್ಟಾಗಿ ಮೀಸಲಾತಿ ಕಬಳಿಸುವವರ ವಿರುದ್ಧ ಹೋರಾಡುವ ಅನಿವಾರ್ಯತೆ ಎದುರಾಗಿದೆ. ಭಾರತ ಸರ್ಕಾರದ ಅಧಿಸೂಚನೆ ದಿ ಕಾನ್ಸಿ÷್ಟಟ್ಟೂಷನ್ ಆಫ್ ಇಂಡಿಯಾ (ಷೆಡ್ಯೂಲ್‌ಟ್ರೆöÊಬ್ಸ್) ಆಕ್ಟ್ 1950ರ ತಿದ್ದಪಡಿ ಅಧಿಸೂಚನೆ ದಿನಾಂಕ:19.3.2020ರಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡದ ಪಟ್ಟಿಯ ಕ್ರಮ ಸಂಖ್ಯೆ 38 ರಲ್ಲಿ ನಾಯಕ ಬುಡಕಟ್ಟಿನ ಪರ್ಯಾಯ ಹೆಸರುಗಳಾದ ಪರಿವಾರ ಮತ್ತು ತಳವಾರ ಬುಡಕಟ್ಟುಗಳನ್ನು ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿ ಸೇರಸಲಾಗಿದೆ. ಆದರೆ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ವಿಶೇಷವಾಗಿ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ ಮುಂತಾದ ಜಿಲ್ಲೆಗಳಲ್ಲಿ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕ್ರಮ ಸಂಖ್ಯೆ 6 ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ,ಕೊಲಿ ಮುಂತಾದ ಜಾತಿಗೆ ಸೇರಿ ಹಿಂದೆ ತಳವಾರಿಕೆ ವೃತ್ತಿ ಮಾಡಿಕೊಂಡಿದ್ದವರು ದಿನಾಂಕ: 19.3.2020 ರ ಆಧಿಸೂಚನೆಯನ್ನು ತಪ್ಪಾಗಿ ಅರ್ಥೈಸಿಕೊಂಡು ನಾಯಕ ತಳವಾರ ಹೆಸರಿನಲ್ಲಿ 2 ಲಕ್ಷಕ್ಕೂ ಹೆಚ್ಚಿಗೆ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ತೆಗೆದುಕೊಂಡು ಅನೇಕ ಸೌಲಭ್ಯಗಳನ್ನು ವಾಮ ಮಾರ್ಗದಲ್ಲಿ ಪಡೆದು ವಂಚಿಸುತ್ತಿರುವ ಬಗ್ಗೆ ಈಗಾಗಲೇ ಸರ್ಕಾರದ ಗಮನ ಸೆಳೆದಿದ್ದರೂ ಸಹ ಈ ಹಗಲು ದರೋಡೆಗೆ ಸರ್ಕಾರ ಕಡಿವಾಣ ಹಾಕದಿರುವುದು ವಿಷಾದನೀಯ. ಈ ವಂಚನೆಯ ಹಾವಳಿಯಿಂದ ನೈಜ ನಾಯಕ ತಳವಾರ ಜಾತಿಯವರಿಗೆ ಶಿಕ್ಷಣ ಸಂಸ್ಥೆಗಳ ಪ್ರವೇಶಗಳಲ್ಲಿ, ನೇರ ಮತ್ತು ಬಡ್ತಿ ನೇಮಕಾತಿಗಳಲ್ಲಿ, ರಾಜಕೀಯ ಕ್ಷೇತ್ರಗಳಲ್ಲಿ ಘನ ಘೋರ ಅನ್ಯಾಯವಾಗುತ್ತಿದೆ. ಶಾಲಾ ದಾಖಲಾತಿಗಳಲ್ಲೂ ಸಹ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಹೆಸರುಗಳ ಬದಲಾಗಿ ನಕಲಿ ತಳವಾರ ಜಾತಿಯ ಹೆಸರುಗಳನ್ನು ಅಳವಡಿಸಿಕೊಂಡು ಸರ್ಕಾರದಿಂದ ಅನೇಕ ಸೌಲಭ್ಯಗಳನ್ನು ಪಡೆದುಕೊಳ್ಳುತ್ತಿರುವುದನ್ನು ಗಂಭೀರವಾಗಿ ಗಮನಿಸಲಾಗಿದೆ. ನಿಜವಾದ ನಾಯಕ ತಳವಾರರಿಗೆ ಸರ್ಕಾರದ ಮುರಾರ್ಜಿ ದೇಸಾಯಿ ಶಾಲೆಗಳಲ್ಲಿಯೂ ಪ್ರವೇಶ ಪಡೆಯಲು ಮೇಲೆ ಕಾಣಿಸಿರುವ ಜಿಲ್ಲೆಗಳಲ್ಲಿ ನಕಲಿ ಜಾತಿ ಪತ್ರಗಳ ಹಾವಳಿಯಿಂದ ಸಾಧ್ಯವಾಗುತ್ತಿಲ್ಲ. ಈ ಅನ್ಯಾಯಗಳ ವಿರುದ್ಧ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ ಸಮಾಜ ಸಂಘಟನೆಗಳು ಮತ್ತು ಇತರೆ ಪರಿಶಿಷ್ಟ ಪಂಗಡದ ಸಂಘಟನೆಗಳು ನಿರಂತರವಾಗಿ ಅನೇಕ ಪ್ರತಿಭಟನೆಗಳನ್ನು ಮಾಡಿ ರಾಜ್ಯ ಸರ್ಕಾರಕ್ಕೆ, ಸಂಬAಧಪಟ್ಟ ಜಿಲ್ಲಾಧಿಕಾರಿಗಳಿಗೆ, ತಹಸೀಲ್ದಾರರುಗಳಿಗೆ ಮನವಿಗಳನ್ನು ನೀಡುತ್ತಿದ್ದರೂ ಸಹ ನಕಲಿ ಜಾತಿ ಪ್ರಮಾಣ ಪತ್ರಗಳ ಹಾವಳಿ ನಿಂತಿರುವುದಿಲ್ಲ. ಸರ್ಕಾರವೂ ಈ ಬಗ್ಗೆ ಅನೇಕ ಸುತ್ತೋಲೆಗಳನ್ನು ನೀಡಿದ್ದರೂ ಸಹ ತಹಸೀಲ್ದಾರರ ಕಛೇರಿಗಳಿಂದ ನಕಲಿ ಜಾತಿ ಪತ್ರಗಳ ವಿತರಣೆ ಮುಂದುವರಿಯುತ್ತಲೇ ಇದೆ ಹಾಗೂ ತಪ್ಪಿತಸ್ಥರಿಗೆ ಯಾವುದೇ ಕ್ರಮ ಆಗಿರುವುದಿಲ್ಲ. ಈ ಸಂಬAಧವಾಗಿ ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ರಿಟ್ ಅರ್ಜಿಯನ್ನು (13777/23) ಕರ್ನಾಟಕ ಉಚ್ಛ ನ್ಯಾಯಲಯದಲ್ಲಿ ದಾಖಲಿಸಿದ್ದು ಘನ ಉಚ್ಛನ್ಯಾಯಾಲಯವು ದಿನಾಂಕ:22.3.2024 ನಕಲಿ ಜಾತಿ ಪತ್ರಗಳನ್ನು ತೆಗೆದು ಕೊಂಡವರ ಮೇಲೆ ಕಾಲಂ ನಂ.4 ಎಫ್ ರಡಿ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದೆ ಹಾಗೂ ದಿನಾಂಕ:12.8.2024ರAದು ನಕಲಿ ಜಾತಿ ಪ್ರಮಾಣ ಪತ್ರ ಪಡೆದವರ ಮೇಲೆ ಏನು ಕ್ರಮ ಕೈಗೊಂಡಿದ್ದೀರಿ ಎಂಬ ಬಗ್ಗೆ ವರದಿ ನೀಡಲು ಘನ ಉಚ್ಚ ನ್ಯಾಯಲಯವು ಆದೇಶಿಸಿರುತ್ತದೆ. ಆದರೂ ದಿನಾಂಕ: 27.7.2025 ರಂದು ಸರ್ಕಾರ ಯಾವುದೇ ಕ್ರಮ ತೆಗೆದು ಕೊಂಡಿರದ ಬಗ್ಗೆ ಅಸಮಧಾನವನ್ನು ವ್ಯಕ್ತಪಡಿಸಿ ನಾಲ್ಕು ವಾರಗಳ ಗಡುವಿನೊಂದಿಗೆ ದಿನಾಂಕ:9.9.2025 ರೊಳಗೆ ಘನ ಉಚ್ಛ ನ್ಯಾಯಾಲಯಕ್ಕೆ ವರದಿ ನೀಡಲು ಆದೇಶಿಸಿರುತ್ತದೆ. 

ಆದರೆ ಆಯಾಯ ಜಿಲ್ಲಾಧಿಕಾರಿಗಳು ನಕಲಿ ಜಾತಿ ಪ್ರಮಾಣ ಪತ್ರ ತೆಗೆದುಕೊಂಡವರ ಮೇಲೆ ಮತ್ತು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡಿದವರ ಮೇಲೆ ಕ್ರಮ ಕೈಗೊಳ್ಳದೇ ಇರುವುದು ಘನ ನ್ಯಾಯಾಲಯಕ್ಕೆ ಮತ್ತು ಕಾನೂನಿಗೆ ಮಾಡಿರುವ ಅಗೌರವ. ಇದನ್ನು ಉಗ್ರವಾಗಿ ಖಂಡಿಸುತ್ತೇವೆ. ಹಾಗೂ ಘನ ನ್ಯಾಯಾಲಯದ ಆದೇಶವನ್ನು ಪಾಲನೆ ಮಾಡಲು ಆಗ್ರಹಿಸುತ್ತದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಕಳೆದ ಒಂದು ವರ್ಷದಿಂದ ಸ್ವತಂತ್ರ ಸಚಿವರನ್ನು ನೇಮಕ ಮಾಡದೇ ಇರುವುದು ಸಮುದಾಯಕ್ಕೆ ಮಾಡಿದ ಅನ್ಯಾಯ. ಗಿರಿಜನ ಉಪಯೋಜನೆಯಡಿ ಪರಿಶಿಷ್ಟರ ಪಂಗಡದವರ ಕಲ್ಯಾಣ ಕಾರ್ಯಕ್ರಮಗಳಿಗೆ ನಿಗದಿ ಮಾಡಿದ್ದ ಹಣವನ್ನು ಗ್ಯಾರಂಟಿ ಕಾರ್ಯಕ್ರಮಗಳಿಗೆ ಉಪಯೋಗಿಸಿರುವುದರಿಂದ ಪರಿಶಿಷ್ಟ ಪಂಗಡದವರ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣದ ಕೊರೆತೆಯಿಂದಾಗಿ ಕಾರ್ಯಕ್ರಮಗಳ ಅನುಷ್ಟಾನಕ್ಕೆ ತೊಂದರೆ ಉಂಟಾಗಿರುತ್ತದೆ. ಇದರಿಂದ ರಾಜ್ಯಾದ್ಯಂತ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ. ಪ್ರೆöÊe಼ï‌ಮನಿ. ಸಹಾಯಧನಗಳಿಗೆ ಕಳೆದ 2 ವರ್ಷಗಳಿಂದ ಹಣದ ಕೊರತೆಯಿಂದ ಸೌಲಭ್ಯಗಳು ಅರ್ಹ ಫಲಾಪೇಕ್ಷೆಗಳಿಗೆ ತಲುಪದಿರುವುದು ಅತ್ಯಂತ ದುರಾದೃಷ್ಟಕರ. ತಕ್ಷಣವೇ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಹೆಚ್ಚುವರಿಯಾಗಿ ರೂ. 10,000 ಕೋಟಿಗಳನ್ನು ಬಿಡುಗಡೆ ಮಾಡಬೇಕು ಹಾಗೂ ಆಯಾಯ ಕಾಂiÀiðಕ್ರಮಗಳಿಗೆ ಬಿಡುಗಡೆ ಮಾಡಿದ ಹಣವನ್ನು ಸಮರ್ಪಕವಾಗಿ ವಿನಿಯೋಗಿಸಲು ಸೂಚಿಸಬೇಕು. ಬಿಡುಗಡೆಯಾದ ಹಣವನ್ನು ಸಮರ್ಪಕವಾಗಿ ವಿನಿಯೋಗಿಸದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಆಗ್ರಹಿಸುತ್ತೇವೆ.

ಕರ್ನಾಟಕ ರಾಜ್ಯದಲ್ಲಿ ಹಿಂದಿನ ಸರ್ಕಾರ ಅನ್ಯರಿಗೆ ಪರಿಶಿಷ್ಟ ಪಂಗಡದವರ ನಕಲಿ ಜಾತಿ ಪ್ರಮಣ ಪತ್ರ ನೀಡುವ ವಿಷಯದಲ್ಲಿ ಪ್ರಮಾದ ವೆಸಗಿದ್ದರಿಂದ ಅಧಿಕಾರ ತ್ಯಜಿಸಬೇಕಾದ ಸಂದರ್ಭವೊದಗಿ ಬಂದಿದ್ದುದು ತಮಗೆ ತಿಳಿದ ವಿಷಯ. ತಮ್ಮ ಸರ್ಕಾರವು ಈ ಬಗ್ಗೆ ಪರಿಶಿಷ್ಟ ಪಂಗಡದವರ ಹಣವನ್ನು ದುರ್ಬಳಕೆ ಮಾಡಿಕೊಂಡು ಅನ್ಯಾಯವಾಗಿರುವುದು ತಮ್ಮ ಗಮನದಲ್ಲಿದೆಯೆಂದು ಭಾವಿಸುತ್ತೇವೆ. ಈ ಪ್ರಮಾದಗಳನ್ನು ಸರಿಪಡಿಸಿಕೊಂಡು ಪರಿಶಿಷ್ಟ ಪಂಗಡದÀವರಿಗೆ ನ್ಯಾಯ ದೊರೆಕಿಸಿಕೊಡಲು ಕೋರುತ್ತೆವೆ. ಹಾಗೆಯೇ ಕೆಳಕಂಡ ಪರಿಶಿಷ್ಟ ಪಂಗಡದÀವರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಈಡೇರಿಸಲು ಒತ್ತಾಯಿಸುತ್ತೇವೆ. 

ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1 ರಲ್ಲಿರುವ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಯವರಿಗೆ ನಾಯಕ ತಳವಾರರ ಹೆಸರಿನಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ನೀಡುವುದನ್ನು ಕೂಡಲೆ ನಿಲ್ಲಿಸುವುದು, ಹಾಗೇನಾದರೂ ನಾಯಕ ತಳವಾರ ಜಾತಿಗೆ ಸೇರಿಲ್ಲದವರು ವಾಮ ಮಾರ್ಗದಲ್ಲಿ ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆದಿದ್ದಲ್ಲಿ ಕರ್ನಾಟಕ ಉಚ್ಛನ್ಯಾಯಲಯದ ಆದೇಶದಂತೆ ಅಂತಹವರ ಮೇಲೆ ಮತ್ತು ಅಂತಹ ಜಾತಿ ಪ್ರಮಾಣ ಪತ್ರಗಳನ್ನು ನೀಡಿದ ಆಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸಿ ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿದೆ, ಈ ನಕಲಿ ಜಾತಿ ಪ್ರಮಾಣ ಪತ್ರಗಳಿಗೆ ಮೂಲ ಕಾರಣ ವೃತ್ತಿಗಾಗಿ ನಾಯಕ ತಳವಾರ ಜಾತಿಗೆ ಸೇರದೆ ಇತರೆ ಜಾತಿಗೆ ಅಂದರೆ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದವರು ತಳವಾರಿಕೆ ವೃತ್ತಿ ಮಾಡುತ್ತಿದ್ದುದು. ಆದರೆ ನಾಯಕ ತಳವಾರರ ಹೆಸರು ಜಾತಿ ಸೂಚಕ ಪದವಾಗಿರುತ್ತದೆ. ರಾಜ್ಯ ಸರ್ಕಾರ ಕುಲಶಾಸ್ತಿçÃಯ ಅಧ್ಯಯನದೊಂದಿಗೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸುವಾಗ ಅಲ್ಲಿಂದ ಪರಿಶಿಷ್ಟ ಪಂಗಡದ ಪಟ್ಟಿಯ ಕ್ರಮ ಸಂಖ್ಯೆ 38ರಲ್ಲಿ ಸೇರಿಸಿರುವುದು ನಾಯಕ ತಳವಾರ ಜಾತಿ ಮಾತ್ರ. ಆದ್ದರಿಂದ ಬೆಸ್ತ, ಅಂಬಿಗ, ಕಬ್ಬಲಿಗ, ಕಬ್ಬೇರ, ಕೊಲಿ ಮುಂತಾದ ಜಾತಿಗೆ ಸೇರಿದ ತಳವಾರರನ್ನು ಅವರು ಸೇರಿರುವ ಇತರೆ ಹಿಂದುಳಿದ ವರ್ಗಗಳ ಪ್ರವರ್ಗ-1 ರ ಕ್ರಮ ಸಂಖ್ಯೆ 6 ರಲ್ಲಿ ಬೆಸ್ತ ಮುಂತಾದವುಗಳ ಜೊತೆ ಸೇರಿಸಿ ಉದ್ಭವಿಸಿರುವ ಗೊಂದಲಕ್ಕೆ ತೆರೆ ಎಳೆಯಬೇಕು, ಪರಿಶಿಷ್ಟ ಪಂಗಡದವರ ಕಾರ್ಯಕ್ರಮಗಳ ಯಶಸ್ವಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗೆ ಕಳೆದ ಒಂದು ವರ್ಷಕ್ಕೂ ಮೇಲ್ಪಟ್ಟು ಸಮಯದಿಂದ ಪರಿಶಿಷ್ಟ ವರ್ಗಗಳ ಇಲಾಖೆಗೆ ಸ್ವತಂತ್ರ ಸಚಿವರಿಲ್ಲದೆ ತೊಂದರೆಯಾಗಿದೆ. ಆದ್ದರಿಂದ ಕೂಡಲೆ ಪರಿಶಿಷ್ಟ ವರ್ಗಗಳ ಇಲಾಖೆಗೆ ಸ್ವತಂತ್ರ ಕ್ಯಾಬಿನೆಟ್ ಸಚಿವರನ್ನ ನೇಮಿಸುವುದು, ತಳವಾರ ಹೆಸರಿನಲ್ಲಿ ಕೋಳಿ,ಕಬ್ಬಲಿಗ,ಬೆಸ್ತಾ, ಸಮುದಾಯದವರು ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲು ಪ್ರಾರಂಭ ಮಾಡಿದರು. ಈ ಸುಳ್ಳು ಜಾತಿ ಪ್ರಮಾಣ ಪತ್ರರದ್ದು ಪಡಿಸಲು ಎಸ್.ಟಿ, ಎಸ್.ಸಿ, ಒಬಿಸಿ ಕಾಯಿದೆ ಕಲಂ 4 ಮತ್ತು 4ಎ ರಲ್ಲಿ ತಹಶೀಲ್ದಾರ್ ಮತ್ತು ಮೇಲಾಧಿಕಾರಿಗಳಿಗೆ ಅಧಿಕಾರ ಇರುತ್ತದೆ. ಆದುದರಿಂದ ಈ ಸಂಬAಧಪಟ್ಟ ಅಧಿಕಾರಿಗಳ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆದೇಶ ನೀಡಲು ಕೋರಿದೆ, ಕಾಲೇಜು ಶಿಕ್ಷಣ ಮತ್ತು ಉನ್ನತ ಶಿಕ್ಷಣ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಕೂಡಲೇ ಸ್ಕಾಲರ್ಷಿಪ್ ಹಣವನ್ನು ಬಿಡುಗಡೆ ಮಾಡುವುದು, ರಾಜ್ಯದಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಅಧ್ಯಯನ ಪೀಠ ಸ್ಥಾಪಿಸಿ ಪರಿಶಿಷ್ಟ ಪಂಗಡದ ವಾಲ್ಮೀಕಿ ನಾಯಕ ಜನಾಂಗದ ಸಾಂಸ್ಕೃತಿಕ, ಆರ್ಥಿಕ, ಶೈಕ್ಷಣಿಕ, ಔದ್ಯೋಗಿಕ, ರಾಜಕೀಯ ವಿಷಯಗಳ ಬಗ್ಗೆ ಆಧ್ಯಯನ ಮಾಡಲು ವಿಶೇಷ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿದೆ, ರಾಜ್ಯದ ವಿವಿಧ ಭಾಗಗಳಲ್ಲಿ ಅಪೂರ್ಣಗೊಂಡಿರುವ ವಾಲ್ಮೀಕಿ ಭವನಗಳನ್ನು ಪೂರ್ಣಗೊಳಿಸಲು ಪರಿಶಿಷ್ಟ ಪಂಗಡದವರು ನಡೆಸುತ್ತಿರುವ ಶಿಕ್ಷಣ ಸಂಸ್ಥೆಗಳಿಗೆ ಸಹಾಯಧನ ವಿದ್ಯಾರ್ಥಿ ವೇತನ ಬಾಕಿ ಬಿಡುಗಡೆಗಾಗಿ ರಾಜ್ಯ ಸರ್ಕಾರವು ಹೆಚ್ಚುವರಿಯಾಗಿ 500 ಕೋಟಿ ಅನುದಾನ ಬಿಡುಗಡೆ ಮಾಡುವುದು, ಈಗಾಗಲೇ ಗುರುತಿಸಿರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ತುಂಬುವುದು ಹಾಗೂ ಹೊಸದಾಗಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಗುರುತಿಸುವುದು, ಕರ್ನಾಟಕ ರಾಜ್ಯದಲ್ಲಿ ಬುಡಕಟ್ಟು ವಿಶ್ವವಿದ್ಯಾಲಯವನ್ನು ಸ್ಥಾಪನೆ ಮಾಡಿ ಸಂಶೋಧನ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಲು ಒತ್ತಾಯಿಸಿದೆ, ರಾಜ್ಯದಲ್ಲಿ ವಾಲ್ಮೀಕಿ ನಾಯಕ ಜನಾಂಗದ ಮೇಲೆ ನಿರಂತರ ದೌರ್ಜನ್ಯ, ಕೊಲೆ, ಅತ್ಯಾಚಾರ ಮುಂತಾದ ಘಟನೆಗಳು ಹೆಚ್ಚಾಗುತ್ತಿದ್ದು ಇಂತಹ ಪ್ರಕರಣಗಳನ್ನು ತಡೆಗಟ್ಟುವಂತೆ ಒತ್ತಾಯಿಸಿದೆ, ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪರಿಶಿಷ್ಟ ಪಂಗಡದ ಹೆಸರಿನಲ್ಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ವಿರೋಧಿಸಿ ಹೋರಾಟ ಮಾಡುತ್ತಿರುವ ಹೋರಾಟಗಾರರ ವಿರುದ್ದ ದಾಖಲಾಗಿರುವ ಪ್ರಕರಣಗಳನ್ನು ಕೂಡಲೆ ಹಿಂಪಡೆದು ಅವರಿಗೆ ಸೂಕ್ತ ಭದ್ರತೆ ಒದಗಿಸುವುದು, ಗಿರಿಜನ ಉಪಯೋಜನೆಯಡಿ ನಿಗದಿಯಾಗಿರುವ ಅನುದಾನವನ್ನು ಪರಿಶಿಷ್ಟರಲ್ಲದವರ ಉಪಯೋಗಕ್ಕೆ ಬಳಸಬಾರದು. ಆಂತಹ ಪ್ರಕರಣಗಳಲ್ಲಿ ದುರ್ಬಳಕೆ ಮಾಡಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯಿಸಿದೆ, ಪರಿಶಿಷ್ಟ ವರ್ಗದ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿದ್ದರು ಇಲಾಖೆಗಳಲ್ಲಿ ಪದೋನ್ನತಿ ನೀಡುವಾಗ ವಿಳಂಬ ಧೋರಣೆ ಅನುಸರಿತ್ತಿರುವುದು ಗಮನಿಸಿದ್ದು ವಿಳಂಬ ಮಾಡದೆ ಪ್ರಮೋಷನ್ ನೀಡುವುದು ಹಾಗೂ ಮೀಸಲಾತಿಯಾನುಸಾರ ಪದೋನ್ನತಿ ನೀಡುವುದು, ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು ಬೇರೆ ಬೇರೆ ಸಮುದಾಯಗಳಿಂದ ಒತ್ತಡಗಳು ಬರುತ್ತಿರುವುದು, ಆ ಒತ್ತಡಗಳಿಗೆ ಸರ್ಕಾರ ಸ್ಪಂದಿಸುತ್ತಿರುವುದನ್ನು ಪತ್ರಿಕೆಗಳ ಮುಖೇನ ಗಮನಿಸಲಾಗುತ್ತಿದೆ. ಇದು ಸಂವಿಧಾನ ಆಶಯಗಳಿಗೆ ವಿರುದ್ಧವಾಗಿರುವುದರಿಂದ ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರವ ನಾವುಗಳು ಸರ್ಕಾರದ ಕ್ರಮವನ್ನು ವಿರೋಧಿಸುತ್ತೇವೆ. ಎಂದು ಮನವಿಯಲ್ಲಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಎಸ್.ಸಿ/ಎಸ್.ಟಿ. ನಕಲಿ ಜಾತಿ ತಡೆ ಸಮಿತಿ ರಾಜ್ಯಾಧ್ಯಕ್ಷ ಶ್ರವಣಕುಮಾರ ಡಿ. ನಾಯಕ, ಜಿಲ್ಲಾ ಅಧ್ಯಕ್ಷ ಶರಣು ಸುಬೇದಾರ, ವಿಭಾಗೀಯ ಅಧ್ಯಕ್ಷ ನಂದಕುಮಾರ ಮಾಲಿಪಾಟೀಲ, ನಂದಕುಮಾರ ನಾಯಕ, ಮಾರುತಿ ಜಮಾದಾರ, ರಾಜು ಮಾವನೂರ, ತಿಪ್ಪಣ್ಣಾ ಇಟಗಾ, ಮಾರುತಿ ಜಾಕನಳ್ಳಿ, ಮಲ್ಲಿಕಾರ್ಜುನ ಸುಬೇದಾರ ಸೇರಿದಂತೆ ಇತರರು ಇದ್ದರು.