ಕಲಬುರಗಿಯಲ್ಲಿ ಮಳೆಯಿಂದಾಗಿ ಸಂಚಾರ ತೊಂದರೆ – ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಜೆ ಘೋಷಣೆ ಅಗತ್ಯ

ಸತತ ಮಳೆಯಿಂದ ಕಲಬುರಗಿ ಜಿಲ್ಲೆಯ ಜನಜೀವನ ಅಸ್ತವ್ಯಸ್ತ – ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲು ಪಾಲಕರ ಮನವಿ

ಕಲಬುರಗಿ: ನಗರದ ಜೊತೆಗೆ ಜಿಲ್ಲೆಯಾದ್ಯಂತ ಶುಕ್ರವಾರ ಬೆಳಿಗ್ಗೆಯಿಂದಲೇ ಧಾರಾಕಾರ ಮಳೆ ಸುರಿಯುತ್ತಿದ್ದು, ಇದರಿಂದ ಸಾಮಾನ್ಯ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ನಗರದಲ್ಲಿನ ಹಲವು ಬಡಾವಣೆಗಳಲ್ಲಿ ರಸ್ತೆಗಳಲ್ಲಿ ಮಳೆನೀರು ಹರಿದು ಸಂಚಾರಕ್ಕೆ ತೊಂದರೆ ಉಂಟಾಗಿದೆ. ಕೆಲವೆಡೆ ಬೃಹತ್ ಮರಗಳು ಬುಡಸಮೇತ ಉರುಳಿ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟುಮಾಡಿವೆ. ಒಳಚರಂಡಿಗಳು ತುಂಬಿ ಹರಿಯುತ್ತಿರುವ ಪರಿಣಾಮ ಮನೆಗಳಿಗೆ ನೀರು ನುಗ್ಗಿದ ಘಟನೆಗಳೂ ದಾಖಲಾಗಿವೆ.

ಮಳೆ ಕಾರಣದಿಂದ ಮಕ್ಕಳು ಶಾಲಾ-ಕಾಲೇಜುಗಳಿಗೆ ಹೋಗಲು ಭಾರಿ ತೊಂದರೆ ಅನುಭವಿಸುತ್ತಿದ್ದಾರೆ. ತೇವಗೊಂಡ ರಸ್ತೆ, ಜಮಿದ ನೀರು ಮತ್ತು ಬಿದ್ದುಹೋಗುವ ಅಪಾಯದ ನಡುವೆ ವಿದ್ಯಾರ್ಥಿಗಳ ಸುರಕ್ಷತೆಗೆ ಪಾಲಕರು ಆತಂಕ ವ್ಯಕ್ತಪಡಿಸಿದ್ದಾರೆ. ಆದ್ದರಿಂದ ತಕ್ಷಣವೇ ಜಿಲ್ಲಾ ಆಡಳಿತ ಸ್ಪಂದಿಸಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಬೇಕೆಂದು ಪಾಲಕರು ಒತ್ತಾಯಿಸಿದ್ದಾರೆ.

ಗ್ರಾಮೀಣ ಭಾಗಗಳಲ್ಲಿಯೂ ಮಳೆಯಿಂದ ಸಣ್ಣಪುಟ್ಟ ಹಳ್ಳ-ಹೊಳೆಗಳು ತುಂಬಿ ಹರಿಯುತ್ತಿದ್ದು, ಗ್ರಾಮೀಣ ರಸ್ತೆಗಳಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಹಲವೆಡೆ ರೈತರು ತಾವು ಬೆಳೆದ ಬೆಳೆಗಳು ನೀರಿನಲ್ಲಿ ಮುಳುಗಿದ ಕಾರಣ ಭಾರಿ ನಷ್ಟ ಎದುರಿಸುವ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ತುರ್ತು ಪರಿಸ್ಥಿತಿಯನ್ನು ಗಮನದಲ್ಲಿಟ್ಟು ಜಿಲ್ಲಾಡಳಿತ ತಕ್ಷಣವೇ ಕ್ರಮ ಕೈಗೊಳ್ಳಬೇಕೆಂದು ಶರಣಗೌಡ ಪಾಟೀಲ ಪಾಳಾ ಆಗ್ರಹಿಸಿದ್ದಾರೆ.

-