ಪ್ರವಾಹ ಪೀಡಿತ ಪ್ರದೇಶ ಸಟಪಟನಳ್ಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ

ಪ್ರವಾಹ ಪೀಡಿತ ಪ್ರದೇಶ ಸಟಪಟನಳ್ಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ

ಪ್ರವಾಹ ಪೀಡಿತ ಪ್ರದೇಶ ಸಟಪಟನಳ್ಳಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ

ತಾಲೂಕಿನ ಸಟಪಟನಳ್ಳಿ ಗ್ರಾಮದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಕಾಗಿಣಾ ನದಿ ನೀರಿನ ಪ್ರವಾಹದಿಂದ ಕೆಲ‌ ಮನೆಗಳಿಗೆ ನೀರು ನುಗ್ಗಿರುವ ಹಿನ್ನೆಲೆಯಲ್ಲಿ ಸೋಮವಾರ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ ನೀಡಿದರು.

ಸಟಪಟನಳ್ಳಿ ಗ್ರಾಮಸ್ಥರಿಗೆ ಭೇಟಿಯಾದ ಸಚಿವ ಡಾ.ಶರಣಪ್ರಕಾಶ ಪಾಟೀಲ ಮನೆಗಳು ಸಂಪೂರ್ಣ ಹಾನಿಯಾದ ವರದಿ ಸಲ್ಲಿಕೆ ನಂತರ ಪರಿಹಾರ ಹಾಗೂ ಪ್ರಾಥಮಿಕ ಸಹಾಯ ಮಾಡಲಾಗುತ್ತದೆ ಎಂದು ಅಭಯದ ಮಾತುಗಳಾಡಿದರು.

ಹೆಚ್ಚಿನ ತೊಂದರೆ ಕಂಡುಬಂದರೆ ತಕ್ಷಣವೇ ಗ್ರಾಮಸ್ಥರನ್ನು ಬೇರೆ ಕಡೆ ಸ್ಥಳಾಂತರ ಮಾಡಲುಸ ಸೂಚನೆ ನೀಡಿದರು.

ಹಬ್ಬದ ನಡುವೆ ಈ ತರ ಪ್ರವಾಹ ಬಂದು ಜನರಿಗೆ ತೊಂದರೆಯಾಗಿದ್ದು ಮನೆಗಳಲ್ಲಿ ನೀರು ನುಗ್ಗಿ ಸಾಮಾಗ್ರಿಗಳು ಚೆಲ್ಲಾಪಿಲ್ಲಿಯಾವಗಿರುವುದು ಶೋಚನೀಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ತಾಲೂಕಾಡಳಿತ, ಪೊಲೀಸ್ ಇಲಾಖೆ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಹಾಗೂ ಅಗ್ನಿ ಶಾಮಕ‌ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು ‌