ವಿದ್ಯಾನಗರದಲ್ಲಿ ವಿಜಯದಶಮಿ ಬನ್ನಿ ಮುರಿಯುವ ಕಾರ್ಯಕ್ರಮ

ವಿದ್ಯಾನಗರದಲ್ಲಿ ವಿಜಯದಶಮಿ ಬನ್ನಿ ಮುರಿಯುವ ಕಾರ್ಯಕ್ರಮ

ವಿದ್ಯಾನಗರದಲ್ಲಿ ವಿಜಯದಶಮಿ ಬನ್ನಿ ಮುರಿಯುವ ಕಾರ್ಯಕ್ರಮ

ಕಲಬುರಗಿ: ನಗರದ ಬಸವೇಶ್ವರ ಆಸ್ಪತ್ರೆಯ ಎದುರಿನ ವಿದ್ಯಾನಗರ ಕಾಲೋನಿಯ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ವಿದ್ಯಾನಗರ ವೆಲ್‌ಫೇರ್ ಸೊಸೈಟಿ ವತಿಯಿಂದ ವಿಜಯದಶಮಿ ಅಂಗವಾಗಿ ಅಕ್ಟೋಬರ್‌ ೨ ರಂದು ಬನ್ನಿ ಮುರಿಯುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಸೊಸೈಟಿ ಅಧ್ಯಕ್ಷ ಮಲ್ಲಿನಾಥ ದೇಶಮುಖ ಅವರು ಬನ್ನಿ ಮರಕ್ಕೆ ಪೂಜೆ ಸಲ್ಲಿಸಿ ಬನ್ನಿ ಮುರಿದು, ಒಬ್ಬರಿಗೊಬ್ಬರು ಬನ್ನಿ ಹಾಗೂ ಬಂಗಾರ ಹಂಚಿಕೊಂಡು ಸೌಹಾರ್ದದ ಸಂಕೇತವಾಗಿ ಹಬ್ಬವನ್ನು ಆಚರಿಸಿದರು.

ಕಾರ್ಯಕ್ರಮದಲ್ಲಿ ಸೊಸೈಟಿ ಉಪಾಧ್ಯಕ್ಷ ಉಮೇಶ ಶೆಟ್ಟಿ, ಕಾರ್ಯದರ್ಶಿ ಶಿವರಾಜ ಅಂಡಗಿ, ಖಜಾಂಚಿ ಗುರುಲಿಂಗಯ್ಯ ಮಠಪತಿ, ಮಲ್ಲಿಕಾರ್ಜುನ ತರುಣ ಸಂಘದ ಪದಾಧಿಕಾರಿಗಳು, ಪ್ರಗತಿ ಕಾಲೋನಿ ಹಾಗೂ ಬಡೇಪೂರ ಕಾಲೋನಿಯ ಹಿರಿಯರು ಉಪಸ್ಥಿತರಿದ್ದರು.

 ಹಬ್ಬದ ಸಂದರ್ಭದಲ್ಲಿ ಭಾಗವಹಿಸಿದ ಎಲ್ಲರೂ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು, ಸಮಾಜದಲ್ಲಿ ಏಕತೆ ಮತ್ತು ಸ್ನೇಹದ ಬಾಂಧವ್ಯ ಬೆಳೆಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.