ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಎಚ್ಚರಿಕೆ – ಸಾರ್ವಜನಿಕರಿಗೆ ಕಿರುಕುಳ ಬೇಡ: ಯಡ್ರಾಮಿ ಪಿಎಸ್ಐ ವಿಶ್ವನಾಥ್ ರೆಡ್ಡಿ

ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಎಚ್ಚರಿಕೆ – ಸಾರ್ವಜನಿಕರಿಗೆ ಕಿರುಕುಳ ಬೇಡ: ಯಡ್ರಾಮಿ ಪಿಎಸ್ಐ ವಿಶ್ವನಾಥ್ ರೆಡ್ಡಿ

ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ಎಚ್ಚರಿಕೆ – ಸಾರ್ವಜನಿಕರಿಗೆ ಕಿರುಕುಳ ಬೇಡ: ಯಡ್ರಾಮಿ ಪಿಎಸ್ಐ ವಿಶ್ವನಾಥ್ ರೆಡ್ಡಿ

ಯಡ್ರಾಮಿ ತಾಲೂಕಿನಲ್ಲಿ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಸಾರ್ವಜನಿಕರಿಗೆ ಕಿರುಕುಳ ನೀಡುತ್ತಿರುವ ಕುರಿತು ಬಂದಿದ್ದ ದೂರಿನ ಹಿನ್ನೆಲೆಯಲ್ಲಿ, ಯಡ್ರಾಮಿ ಪೊಲೀಸ್ ಠಾಣಾ ಅಧಿಕಾರಿ ಪಿಎಸ್ಐ ವಿಶ್ವನಾಥ್ ರೆಡ್ಡಿ ಅವರು ಸಂಬಂಧಿತ ಸಿಬ್ಬಂದಿ ಹಾಗೂ ಮೈಕ್ರೋ ಫೈನಾನ್ಸ್ ಕಂಪನಿಗಳ ಪ್ರತಿನಿಧಿಗಳಿಗೆ ಸಭೆ ಕರೆದಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರ್‌ಬಿಐ ನಿಯಮಾವಳಿಗಳ ಪ್ರಕಾರ ಗ್ರಾಹಕರೊಂದಿಗೆ ಸೌಜನ್ಯದಿಂದ ವರ್ತಿಸುವುದು ಕಡ್ಡಾಯವಾಗಿದ್ದು, ಸಾರ್ವಜನಿಕರಿಗೆ ಕಿರುಕುಳ ನೀಡುವ ಅಥವಾ ಅನೌಚಿತ್ಯದ ವರ್ತನೆ ತೋರಿದಲ್ಲಿ ಕಾನೂನುಬದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಎಚ್ಚರಿಸಿದರು.

ಮತ್ತಷ್ಟು, ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮಾತ್ರ ದೂರವಾಣಿ ಮೂಲಕ ಗ್ರಾಹಕರೊಂದಿಗೆ ಸಮಾಲೋಚನೆ ನಡೆಸಬೇಕೆಂದು ಸೂಚನೆ ನೀಡಿದರು. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ತಕ್ಷಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಭಾಗವಹಿಸಿದ್ದ ಮೈಕ್ರೋ ಫೈನಾನ್ಸ್ ಪ್ರತಿನಿಧಿಗಳು ಮುಂದಿನ ದಿನಗಳಲ್ಲಿ ಸಾರ್ವಜನಿಕರಿಗೆ ಕಿರುಕುಳ ನೀಡದಂತೆ ಸೌಜನ್ಯದಿಂದ ಕಾರ್ಯನಿರ್ವಹಿಸುವ ಭರವಸೆ ನೀಡಿದರು.

— ವರದಿ: ಜೇಟ್ಟೆಪ್ಪ ಎಸ್. ಪೂಜಾರಿ