ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಎಂ.ಎಸ್. ಆತ್ಮಾನಂದ ಅಧಿಕಾರ ಸ್ವೀಕಾರ

ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಎಂ.ಎಸ್. ಆತ್ಮಾನಂದ ಅಧಿಕಾರ ಸ್ವೀಕಾರ
ಬೆಂಗಳೂರು, ಅ. 6:ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮ ನಿಯಮಿತದ ನೂತನ ಅಧ್ಯಕ್ಷರಾಗಿ ಮಾಜಿ ಸಚಿವರಾದ ಶ್ರೀ ಎಂ.ಎಸ್. ಆತ್ಮಾನಂದ ಅವರು ಇಂದು (06.10.2025) ಮಧ್ಯಾಹ್ನ 3 ಗಂಟೆಗೆ ನಿಗಮದ ಕೇಂದ್ರ ಕಚೇರಿಯಾದ ವಿಶ್ವೇಶ್ವರಯ್ಯ ದೊಡ್ಡ ಗೋಪುರ, 5ನೇ ಮಹಡಿಯಲ್ಲಿ ಅಧಿಕಾರ ವಹಿಸಿಕೊಂಡರು.
ಈ ಸಂದರ್ಭದಲ್ಲಿ ಮಂಡ್ಯ ನಗರದ ಶಾಸಕರಾದ ಶ್ರೀ ರವಿ ಗಾಣಿಗ ರವರು, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಮೇಶ್ ಸಂಗಾರವರು, ಸೇರಿದಂತೆ ಅನೇಕ ರಾಜಕೀಯ ಮುಖಂಡರು, ಗಣ್ಯರು ಹಾಗೂ ಒಕ್ಕಲಿಗ ಸಮುದಾಯದ ನಾಯಕರು ಉಪಸ್ಥಿತರಿದ್ದರು.
ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಶ್ರೀ ಎಂ.ಎಸ್. ಆತ್ಮಾನಂದ ಅವರು ಮಾತನಾಡಿ, “ಒಕ್ಕಲಿಗ ಸಮುದಾಯದ ಸರ್ವಾಂಗೀಣ ಅಭಿವೃದ್ಧಿ, ಯುವಜನರಿಗೆ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳ ಸೃಷ್ಟಿ, ಮತ್ತು ನಿಗಮದ ಕಾರ್ಯಚಟುವಟಿಕೆಗಳಲ್ಲಿ ಪಾರದರ್ಶಕತೆ ಹಾಗೂ ವೇಗ ತರಲು ಬದ್ಧರಾಗಿದ್ದೇನೆ” ಎಂದು ಹೇಳಿದರು.
ನಿಗಮದ ನೂತನ ಅಧ್ಯಕ್ಷರಾಗಿ ಆತ್ಮಾನಂದ ಅವರ ಅಧಿಕಾರ ವಹಿಸಿಕೊಳ್ಳುವುದರಿಂದ ಸಮುದಾಯದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹೊಸ ಉತ್ಸಾಹ ತುಂಬಲಿದೆ ಎಂದು ಹಾಜರಿದ್ದ ಗಣ್ಯರು ಅಭಿಪ್ರಾಯಪಟ್ಟರು.