ತಪ್ಪಿತಸ್ಥನಿಗೆ ಉಗ್ರ ಶಿಕ್ಷೆ ವಿಧಿಸಿ: ಮಲ್ಲಿಕಾರ್ಜುನ ನೀಲೂರ

ತಪ್ಪಿತಸ್ಥನಿಗೆ ಉಗ್ರ ಶಿಕ್ಷೆ ವಿಧಿಸಿ: ಮಲ್ಲಿಕಾರ್ಜುನ ನೀಲೂರ

ತಪ್ಪಿತಸ್ಥನಿಗೆ ಉಗ್ರ ಶಿಕ್ಷೆ ವಿಧಿಸಿ: ಮಲ್ಲಿಕಾರ್ಜುನ ನೀಲೂರ

ಕಲಬುರಗಿ: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆಯನ್ನು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಸಮಿತಿಯ ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ನೀಲೂರ ತೀವ್ರವಾಗಿ ಖಂಡಿಸಿದ್ದಾರೆ.

   ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ನ್ಯಾಯಮೂರ್ತಿ ಗವಾಯಿ ಅವರ ಮೇಲಾದ ದಾಳಿ ನ್ಯಾಯಾಂಗದ ಮೇಲಿನ ದಾಳಿ ಮಾತ್ರವಲ್ಲ.ಸಂವಿಧಾನಕ್ಕೆ ಮಾಡಿದ ಅವಮಾನ.ದಲಿತ ಎಂಬುವ ಕಾರಣಕ್ಕಾಗಿ ಅವರಿಗೆ ಶೂ ಎಸೆಯುವ ಯತ್ನ ಮಾಡಿರುವುದು ಘನಘೋರ ಅಪರಾಧವಾಗಿದೆ. ತಕ್ಷಣವೇ ಅವನಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ದಲಿತರನ್ನು ಕೆಣಕಿದರೆ ಮತ್ತೊಂದು ಕೋರೆಗಾಂವ ಚಳವಳಿ ಸಂಭವಿಸುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ. ಜಾತಿ ಮತ್ತು ಧರ್ಮದ ಹೆಸರಲ್ಲಿ ಸಮಾಜವನ್ನು ಒಡೆದು ಹಾಕಿ, ಪರಸ್ಪರ ದ್ವೇಷ ಮತ್ತು ಅಸಹನೆಯನ್ನು ಹುಟ್ಟು ಹಾಕಿರುವ ಕಾರಣಕ್ಕಾಗಿಯೇ ರಾಕೇಶ ಮನುವಾದಿ ಮನಸುಗಳು ಕಿಶೋರನಂತಹ ಸಮಾಜದಲ್ಲಿ ಹುಟ್ಟಿಕೊಂಡಿವೆ. ನಮ್ಮ ದಲಿತರ ಮೇಲೆ ಹಲ್ಲೆಗಳು ನಿರಂತರವಾಗಿ ನಡೆಯುತ್ತಿವೆ ಇನ್ನೂ ಇದು ಸಹಿಸಲು ಆಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

     ವಕೀಲ ಕಿಶೋರ್ ಶೂ ಎಸೆದು ದಲಿತ ಸಮುದಾಯಕ್ಕೆ ಸೇರಿದ ನ್ಯಾಯಮೂರ್ತಿ ಹಾಗೂ ದೇಶದ ನ್ಯಾಯಾಂಗ ವ್ಯವಸ್ಥೆಯನ್ನು ಅವಮಾನಿಸಿದ್ದಾರೆ. ಸಂವಿಧಾನ ಜಾರಿಗೆ ಬಂದ 75 ವರ್ಷಗಳ ನಂತರವೂ ಮನುವಾದಿಗಳ ಮನದಲ್ಲಿ ಪರಿಶಿಷ್ಟರ ಬಗ್ಗೆ ಅಸಹನೆ ಇರುವುದಕ್ಕೆ ಈ ಘಟನೆಯೇ ನಿದರ್ಶನವಾಗಿದೆ ಎಂದು ದೂರಿದ್ದಾರೆ. ಗವಾಯಿ ಅವರು ತಮ್ಮ ಅರ್ಹತೆ ಹಾಗೂ ಸಾಧನೆ ಮೂಲಕ ದೇಶದ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ಹುದ್ದೆಗೆ ಏರಿದ್ದಾರೆ. ಅವರನ್ನು ಅವಮಾನಿಸಿರುವ ವಕೀಲರ ವಿರುದ್ಧ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.