ಸಿಜೆ ಗವಾಯಿ ಮೇಲೆ ಶೂ ಎಸೆತ: ಖಂಡನೆ

ಸಿಜೆ ಗವಾಯಿ ಮೇಲೆ ಶೂ ಎಸೆತ: ಖಂಡನೆ
ಕಲಬುರಗಿ: ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ರ್ಆ. ಗವಾಯಿ ಅವರ ಮೇಲೆ ಶೂ ಎಸೆದು ಧಾಳಿಗೈದ ದುಷ್ಕೃತ್ಯವನ್ನು ಅಖಿಲ ಕರ್ನಾಟಕ ಡಾ.ಎಚ್.ಸಿ.ಮಹಾದೇವಪ್ಪಾ ಅಭಿಮಾನಿಗಳ ಸಂಘವು ತೀವ್ರವಾಗಿ ಖಂಡಿಸುತ್ತದೆ. ಹಾಗೂ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆದ ಕೋಮುವಾದಿ ಹೀನ ಮನಸ್ಸಿನ ಆರೋಪಿ ವಕೀಲನ ಮೇಲೆ ಸೂಕ್ತ ಕಾನೂನು ಕ್ರಮವನ್ನು ಕೂಡಲೇ ಕೈಗೊಳ್ಳಬೇಕೆಂದು ಸಂಘದ ರಾಜ್ಯಾಧ್ಯಕ್ಷ ಓಂಕಾರ ವಠಾರ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು,
ಸರ್ವೋಚ್ಚ ನ್ಯಾಯಾಲಯದಲ್ಲಿ ಸಿಜೆಐ ಅವರ ಮೇಲೆ ದುರುದ್ದೇಶಪೂರ್ವಕವಾಗಿ ಅವಮಾನಗೈದು ಗೂಂಡಾಗಿರಿಯ ವಿಕೃತಿ ಮೆರೆದ ಆರೋಪಿಯನ್ನು ಜಾಮೀನು ರಹಿತ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತದೆ. ಪೂರ್ವ ನಿಯೋಜಿತವಾಗಿ ದುರುದ್ದೇಶದಿಂದ ನಡೆಸಿದ ಈ ಘಟನೆಯ ಹಿಂದೆ ದೇಶದ ಸಂವಿಧಾನದ ಜಾತ್ಯಾತೀತ ಬುನಾದಿಗೆ ವಿರುದ್ದವಾಗಿ ಕೋಮುವಾದಿ ಹಾಗೂ ಜಾತಿವಾದಿ ಹೀನ ಮನಸ್ಥಿತಿಯ ಶಕ್ತಿಗಳು ಇರುವಂತಿದೆ. ಸಂವಿಧಾನವನ್ನು ಅಪ ಮೌಲ್ಯಗೊಳಿಸುವ ಕೆಲ ಬಿಜೆಪಿ ನಾಯಕರ ಹೇಳಿಕೆಗಳು ಆರೋಪಿಗೆ ಇಂತಹ ದುಷ್ಕೃತ್ಯ ನಡೆಸಲು ಬಲ ತುಂಬಿವೆ. ಕೋಮುವಾದಿ ಶಕ್ತಿಗಳ ದುಷ್ಕೃತ್ಯಕ್ಕೆ ಗುರಿಯಾಗಿರುವ ಸಿಜೆಐ ಬಿ.ಆರ್‌ಗವಾಯಿ ಅವರಿಗೆ ಕೇಂದ್ರ ಸರ್ಕಾರವು ಸಂಪೂರ್ಣ ರಕ್ಷಣೆಯನ್ನು ಖಾತ್ರಿ ಪಡಿಸಬೇಕು ಹಾಗೂ ಅಸಹಿಷ್ಣುತೆಯಿಂದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ದಾಳಿಗೆ ಮುಂದಾದ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ಅವರು ಒತ್ತಾಯಿಸಿದ್ದಾರೆ.