ಎಚ್ ಕೆ ಇ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶಿಕ್ಷಕರಿಗಾಗಿ ಐದು ದಿನಗಳ ಎಫ್ ಡಿ ಪಿ ಕಾರ್ಯಕ್ರಮ

ಕಲಬುರ್ಗಿ: ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಕ್ವಾಲಿಟಿ ಅಶ್ಯೂರೆನ್ಸ ಸೆಲ್ ಸಹಯೋಗದೊಂದಿಗೆ ಸಂಸ್ಥೆಯ ಶಿಕ್ಷಕರಿಗಾಗಿ ಗಣಕಯಂತ್ರ ಜ್ಞಾನ ಹಾಗೂ ಕೃತಕ ಬುದ್ಧಿಮತ್ತೆ ಕುರಿತಾಗಿ ಐದು ದಿನಗಳ ಕಾಲ ಫ್ಯಾಕಲ್ಟಿ ಡೆವಲಪ್ಮೆಂಟ್ ಪ್ರೋಗ್ರಾಂ ಸಂಸ್ಥೆಯ ಪಾಲಿಟೆಕ್ನಿಕ್ ಕಾಲೇಜು ಹಾಗೂ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಸಹಕಾರದೊಂದಿಗೆ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಂಚಾಲಕರಾದ ನಾಗಣ್ಣ ಘಂಟಿ ಮಾತನಾಡಿ ಇಂದಿನ ದಿನಗಳಲ್ಲಿ ಪ್ರತಿಯೊಬ್ಬ ಸಿಬ್ಬಂದಿಗೆ ಕಂಪ್ಯೂಟರ್ ಜ್ಞಾನ ಕೃತಕ ಬುದ್ಧಿಮತ್ತೆ ಅವಶ್ಯಕತೆ ಇದೆ ಎಂದು ಹೇಳಿದರು. ಆಡಳಿತ ಮಂಡಳಿ ಸದಸ್ಯರಾದ ಅನಿಲಕುಮಾರ ಮರಗೋಳ, ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯಮಲ್ಲಪ್ಪ ಬೋತಗಿ, ಕ್ವಾಲಿಟಿ ಅಶ್ಯೂರೆನ್ಸ ಸೆಲ್ ಮುಖ್ಯಸ್ಥೆ ಡಾ ಉಮಾ ರೇವೂರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರಾದ ಶರಣಬಸಪ್ಪ ಗಲಗಲಿ,ಉಪ ಪ್ರಾಚಾರ್ಯರಾದ ಸಂಗಮೇಶ ನೀಲಾ ವೇದಿಕೆಯ ಮೇಲೆ ಉಪಸ್ಥಿತರಿದ್ದರು.ಕಾರ್ಯಕ್ರಮದ ಸಂಯೋಜಕರಾದ ಡಾ ಮೈತ್ರಾದೇವಿ ಹಳೆಮನಿ ಕಾರ್ಯಕ್ರಮ ನಿರೂಪಿಸಿದರು,ರಾಜಶ್ರೀ ಎಂ ಬಿ ವಂದಿಸಿದರು