ಆಳಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ

ಆಳಂದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ
ಆಳಂದ: ಮಾನಸಿಕ ಆರೋಗ್ಯ ದಿನಾಚರಣೆಯ ನಿಮಿತ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿತವಾದ ಜಾಗೃತಿ ಮತ್ತು ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶೆ ಕುಮಾರಿ ಸುಮನ್ ಚಿತ್ತರಗಿ ಅವರು, ಮಾನಸಿಕ ಒತ್ತಡದಿಂದ ಬಳಲುವವರು ತಕ್ಷಣ ವೈದ್ಯರ ಸಲಹೆ ಪಡೆಯಬೇಕೆಂದು ಸಲಹೆ ನೀಡಿದರು. ಒತ್ತಡವನ್ನು ಕಡೆಗಣಿಸಿದರೆ ಜೀವನದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ಎಚ್ಚರಿಸಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ. ಸುಶೀಲ್ ಕುಮಾರ್ ಅಂಬುರೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತ ಅಧಿಕಾರಿ ಡಾ. ಉಮಾ ಕಾಂತ್ ರಾಜಗಿರಿ ಮತ್ತು ನ್ಯಾಯವಾದಿ ಸಂಘದ ಹಂಗಾಮಿ ಅಧ್ಯಕ್ಷ ಬಲಭೀಮ ಟಿ. ಶಿಂದೆ ಹಿರಿಯ ಆರೋಗ್ಯ ನೀರಿಕ್ಷಣಾಧಿಕಾರಿ ಅಬ್ದುಲರವುಫ್ ಉಪಸ್ಥಿತರಿದ್ದರು.
ನ್ಯಾಯವಾದಿ ಎಂ.ವಿ. ಏಕ ಬೋಟೆ ಕಾನೂನು ಜಾಗೃತಿ ಉಪನ್ಯಾಸ ನೀಡಿದರು. ಸುಧೀರ್ ಪಡಶೆಟ್ಟಿ ನಿರೂಪಿಸಿದರು. ನಾಗರಾಜ್ ವಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ನ್ಯಾಯವಾದಿಗಳು ಸಾರ್ವಜನಿಕರು ಉಪಸ್ಥಿತರಿದ್ದರು
ವರದಿ ಡಾ. ಅವಿನಾಶ S ದೇವನೂರ