ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಗಡಿಪಾರು ಮಾಡಿ : ಸಚೀನ್ ಫರತಾಬಾದ್ ಆಗ್ರಹ

ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಗಡಿಪಾರು ಮಾಡಿ :  ಸಚೀನ್ ಫರತಾಬಾದ್ ಆಗ್ರಹ

ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಗಡಿಪಾರು ಮಾಡಿ : ಸಚೀನ್ ಫರತಾಬಾದ್ ಆಗ್ರಹ

ಕಲಬುರಗಿ: ಜಿಲ್ಲೆಯ ಶಹಾಬಾದ ತಾಲೂಕಿನ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀ ಅಂಬಿಗರ ಚೌಡಯ್ಯನ ವರ ಮೂರ್ತಿ ಇದೇ ವರ್ಷ ಸ್ಥಾಪನೆಯಾಗಿ ಉದ್ಘಾಟ ನೆಯಾಗಿಯಾಗಿತ್ತು. ಕೆಲವು ಸಮಾಜ ಘಾತಕ ಕಿಡಿಗೇಡಿ ವ್ಯಕ್ತಿಗಳು ನೂತನ ಮೂರ್ತಿಯನ್ನು ಭಗ್ನ ಗೊಳಿಸಿದ್ದು ಅಕ್ಷಮ್ಯ ಅಫರಾದವಾಗಿದೆ ಈ ಘಟನೆ ಅತ್ಯಂತ ಖಂಡನೀಯವಾಗಿದೆ ಎಂದು ಜೈ ಕನ್ನಡಿಗರ ರಕ್ಷಣಾ ವೇದಿಕೆ ಸಂಸ್ಥಾಪಕ ಅಧ್ಯಕ್ಷರಾದ ಸಚೀನ್ ಫರತಾಬಾದ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮಹಾಪುರುಷರು ಯಾವುದೇ ಒಂದು ಸಮಾಜಕ್ಕೆ ಸೀಮಿತ ವಾಗಿರುವುದಿಲ್ಲ, ಅವರನ್ನು ಎಲ್ಲಾ ಸಮಾಜದವರು ಗೌರವಿಸುತ್ತಾರೆ. ಮುತ್ತಗಾ ಗ್ರಾಮದನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನಗೊಳಿಸಿರುವುದು ಭಾವನ ತ್ಮಕವಾಗಿ ಕೋಲಿ-ಕಬ್ಬಲಿಗ ಸಮಾಜಕ್ಕೆ ನೇರವಾಗಿ ದಾಳಿ ಮಾಡಿದಂತಾಗಿದೆ.

ನಿಜಶರಣ ಶ್ರೀ ಅಂಬಿಗರ ಚೌಡಯ್ಯನವರ ಮೂರ್ತಿಯನ್ನು ಭಗ್ನ ಗೊಳಿಸಿರುವ ಸಮಾಜ ಘಾತಕ ಕಿಡಿಗೇಡಿಗಳನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳವುದರ ಜೊತೆಗೆ ಜಿಲ್ಲೆಯಿಂದ ಗಡಿಪಾರು ಮಾಡಬೇಕು ಹಾಗೂ ಜಿಲ್ಲಾಡಳಿತದಿಂದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಶ್ರೀಅಂಬಿಗರ ಚೌಡಯ್ಯನವರ ನೂತನ ಮೂರ್ತಿಯನ್ನು ನಿರ್ಮಾಣ ಮಾಡಿಕೊಡಬೇಕೆಂದು ಸಚೀನ ಅವರು ಪ್ರಕಟಣೆ ಮೂಲಕ ಆಗ್ರಹಿಸಿದ್ದಾರೆ

.