ಅ.16 ರಂದು ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರೈತರಿಂದ ಪ್ರತಿಭಟನೆ : ಬೈಕ್ ರ್‍ಯಾಲಿ

ಅ.16 ರಂದು ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರೈತರಿಂದ ಪ್ರತಿಭಟನೆ : ಬೈಕ್ ರ್‍ಯಾಲಿ

ಅ.16 ರಂದು ಬೆಳೆ ಪರಿಹಾರಕ್ಕಾಗಿ ಒತ್ತಾಯಿಸಿ ರೈತರಿಂದ ಪ್ರತಿಭಟನೆ : ಬೈಕ್ ರ್‍ಯಾಲಿ :..

ಶಹಾಬಾದ : - ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ರೈತರ ಬೆಳೆಗಳು ನಷ್ಟವಾಗಿದ್ದು ಸರ್ಕಾರ ಶೀಘ್ರ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ (ವಾಸುದೇವ್ ಮೇಟಿ) ಹಸಿರು ಸೇನೆ ಬಣದ ವತಿಯಿಂದ ಅ.16 ರಂದು ಬೈಕ್ ರಾಲಿ ಮತ್ತು ಪಾದಯಾತ್ರೆ ಮೂಲಕ ಪ್ರತಿಭಟನೆ ಮಾಡಲಾಗುವುದೆಂದು ಸಂಘದ ಜಿಲ್ಲಾಧ್ಯಕ್ಷ ಪ್ರಶಾಂತ್ ಗೌಡ ಪಾಟೀಲ್ ಹೇಳಿದರು.

ಅವರು ರೈತ ಸಂಘದ ವತಿಯಿಂದ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು 

ಗುರುವಾರ ಬೆಳಗ್ಗೆ 11 ಗಂಟೆಗೆ ಬಸವೇಶ್ವರ ವೃತ್ತದಿಂದ ಪ್ರಮುಖ ರಸ್ತೆಗಳ ಮೂಲಕ ಬೈಕ್ ರಾಲಿ ನಡೆಸಿ ಡಾ. ಅಂಬೇಡ್ಕರ್ ಪ್ರತಿಮೆ ಹತ್ತಿರ ಪ್ರತಿಭಟಿಸಲಾಗುವುದು. ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದೆ ಅದಕ್ಕಾಗಿ ಸರಕಾರ ಸಂಪೂರ್ಣ ಪರಿಹಾರ ನೀಡಬೇಕು, ಹೊಲಗಳಿಗೆ ಸಂಪರ್ಕ ರಸ್ತೆ ಕಲ್ಪಿಸಿ ಕೊಡಬೇಕು, ಭೀಮ, ಕಾಗಿನ ನದಿಯ ಪ್ರವಾಹದಿಂದ ತೊಂದರೆ ಅನುಭವಿಸಿದ ಸಂತ್ರಸ್ತರಿಗೆ ಪರಿಹಾರದ ಜೊತೆಗೆ ಆರೋಗ್ಯದ ಕಡೆ ಗಮನಹರಿಸಿ ಚಿಕಿತ್ಸೆ ನೀಡಬೇಕು, ಬೆಳೆ ನಷ್ಟ ಅನುಭವಿಸಿದ ರೈತರಿಗೆ 25 ಸಾವಿರ ರೂ.ಗಳು ಪ್ರತಿ ಎಕರೆಗೆ ಪರಿಹಾರ ನೀಡಬೇಕು, ನದಿಗಳ ಹಿನ್ನೀರಿನ ಪ್ರವಾಹ ಪೀಡಿತ ಸಂತ್ರಸ್ಥರಿಗೆ ಪರಿಹಾರ ನೀಡಬೇಕು, ರಾಜ್ಯದ ರೈತರ ಸಾಲ ಸಂಪೂರ್ಣ ಮನ್ನ ಮಾಡಬೇಕು ಎಂದು ಒತ್ತಾಯಿಸಿ ಪ್ರತಿಭಟಿಸಲಾಗುವುದು ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಜೇವರ್ಗಿ ತಾಲೂಕಿನ ಸಂಘದ ಅಧ್ಯಕ್ಷ ಪಂಚಯ್ಯ ಹಿರೇಮಠ, ಶಹಾಬಾದ ತಾಲೂಕಿನ ಮಹಿಳಾ ಘಟಕದ ಅಧ್ಯಕ್ಷ ಸಂಗೀತ ವಿ. ವಾಲಿ, ತಾಲೂಕು ಉಪಾಧ್ಯಕ್ಷ ಶೀತಲ್ ಚಹ್ವಾಣ, ರಾಜ್ಯ ಕಾರ್ಯದರ್ಶಿ ಕವಿತಾ ಷಟ್ಗಾರ, ವಿರೇಶ ವಾಲಿ ಉಪಸ್ಥಿತರಿದ್ದರು.