ಆರ್ ಎಸ್ ಎಸ್ ವಿರುದ್ಧ ಯುಥ ಕಾಂಗ್ರೆಸ್ ಕಾರ್ಯಕರ್ತರಿಂದ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ

ಆರ್ ಎಸ್ ಎಸ್ ವಿರುದ್ಧ ಯುಥ ಕಾಂಗ್ರೆಸ್ ಕಾರ್ಯಕರ್ತರಿಂದ ಟೈರಿಗೆ ಬೆಂಕಿ ಹಚ್ಚಿ ಪ್ರತಿಭಟನೆ
ಕಲಬುರಗಿ: ಸರಕಾರಿ ಪ್ರದೇಶದಲ್ಲಿ ಆರ್ ಎಸ್ ಎಸ್ ಕಾರ್ಯಕ್ರಮ ನಿಷೇಧಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರಿಗೆ ಪತ್ರ ಬರೆದಿದ್ದ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅಶ್ಲೀಲ ಪದ ಬಳಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೊಲೆ ಬೇದರಿಕೆ ಹಾಕಿದ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರುಗಡೆ ಟೈರಿಗೆ ಬೆಂಕಿ ಹಚ್ಚಿ ರಸ್ತೆ ತಡೆದು ಕಾಂಗ್ರೆಸ್ ಕಾರ್ಯಕರ್ತರಿಂದ ಆರ್ ಎಸ್ ಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಬೆದರಿಕೆ ಕರೆ ಬಂದಿರುವ ಪೋನ್ ನಂಬರ್ ಗಳನ್ನು ಪತ್ತೆ ಹಚ್ಚಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ಪಕ್ಷದ ಯುವ ಘಟಕದ ಅಧ್ಯಕ್ಷ ಶಕೀಲ್ ಅಹಮದ್ ಸರಡಗಿ ಆಗ್ರಹಿಸಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಪ್ರವೀಣ್ ಪಾಟೀಲ್ ಹರವಾಳ, ಡಾ. ಕಿರಣ ದೇಶಮುಖ್, ಫಾರೂಕ್ ಮಾನಿಯಾಳ, ರಾಜೀವ್ ಜಾನೆ, ಶಿವಾನಂದ ಹೊನಗುಂಟಿ, ಈರಣ್ಣ ಪಾಟೀಲ್ ಝಳಕಿ, ಓವೈಸ್ ಶೇಖ್, ಕುಸರೋ ಜಾಗಿರದಾರ, ಪ್ರಕಾಶ ಕಪನೂರ್, ರೇಣುಕಾ ಸಿಂಗೆ, ದಿನೇಶ ದೊಡ್ಡಮನಿ, ದೇವೇಂದ್ರ ಸಿನ್ನೂರ್,ಅಶ್ವಿನ್ ಸಂಕಾ, ಶೇಖ ಸಮರಿನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.