ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ, ನಿಂದನೆಗೆ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಖಂಡನೆ

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ, ನಿಂದನೆಗೆ  ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಖಂಡನೆ

ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಜೀವ ಬೆದರಿಕೆ ಕರೆ, ನಿಂದನೆಗೆ ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಖಂಡನೆ

ಸೇಡಂ.ಅ.16ರಾಷ್ಟ್ರೀಯ ಸ್ವಯಂಸೇವಕ ಸಂಘದ ಚಟುವಟಿಕೆಗಳನ್ನು ಸಾರ್ವಜನಿಕ ಪ್ರದೇಶಗಳಲ್ಲಿ ತೊಡಗಿಸಿಕೊಳ್ಳದೆ ಸೂಕ್ತ ಕ್ರಮ ವಹಿಸುವಂತೆ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖಾ ಸಚಿವ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬರೆದ ಪತ್ರವನ್ನು ಪ್ರಶ್ನಿಸಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ದೂರವಾಣಿ ಕರೆ ಮಾಡಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಅವಾಚ್ಯ ಶಬ್ದದಿಂದ ನಿಂದನೆ ಮಾಡುತ್ತಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ಸಂಗತಿಯಾಗಿದೆ ಎಂದು ಸೇಡಂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ ಬೇಸರ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆರ್.ಎಸ್.ಎಸ್ ಸರ್ಕಾರಿ, ಅನುದಾನಿತ ಶಾಲೆ, ಪ್ರದೇಶಗಳಲ್ಲಿ ತನ್ನ ಬೈಟಕ್ ಹಾಗೂ ಇನ್ನಿತರ ಚಟುವಟಿಕೆಗಳನ್ನು ಮಾಡದೆ ಖಾಸಗಿಯಾಗಿ ಮಾಡಿಕೊಳ್ಳಲಿ ಎನ್ನುವ ಪತ್ರದ ವಿಷಯವನ್ನು ತಿರುಚಿ ದೇಶದ್ರೋಹಿ ಪಟ್ಟಕಟ್ಟಿ, ಸತ್ಯವನ್ನು ಮರೆಮಾಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿರುವ ಕೆಲ‌ಕಿಡಿಗೇಡಿಗಳು ಫೋನ್ ಕರೆ ಮೂಲಕ ಜೀವ ಬೆದರಿಕೆ ಹಾಕುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಚಿವ ಪ್ರಿಯಾಂಕ್ ಖರ್ಗೆ ಅವರ ನಿಲುವಿನ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು ಅದರಲ್ಲಿ‌ ಉಲ್ಲೇಖಿಸಿದ ವಿಷಯದ ಬಗ್ಗೆ ಸಿಎಂ ಅವರಿಗೂ ಗಮನಕ್ಕೆ ತರಲಾಗಿದೆ ಸೂಕ್ತ ಕ್ರಮಕ್ಕೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ ಎಂದು ಖುದ್ದು ಸಿಎಂ ಸಿದ್ದರಾಮಯ್ಯನವರ ಹೇಳಿದ್ದಾರೆ, ಆದರೂ ಸಹ ಜೀವ ಬೆದರಿಕೆ, ನಿಂದನೆ ಕರೆಗಳು ಹಗಲು, ರಾತ್ರಿ ಎನ್ನದೆ ಬರುತ್ತಿರುವುದು ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಇಂತಹದ್ದೆ ಕಲಿಸಿಕೊಡುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ.