BMTC, KUWSDB & KKRTC ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟ ,ಕೀ ಉತ್ತರ

BMTC, KUWSDB & KKRTC  ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಕಟ ,ಕೀ ಉತ್ತರ

ಕರ್ನಾಟಕ ಪರೀಕ್ಷಾ ಪ್ರಾಧಿಕಾರ 13.07.2024 2 14.07.2024 0 BMTC (ನಿರ್ವಾಹಕರು-ಕಲ್ಯಾಣ ಕರ್ನಾಟಕ), KUWSDB (ಪ್ರಥಮ ದರ್ಜೆ ಲೆಕ್ಕ ಸಹಾಯಕರು) & KKRTC ಸಂಸ್ಥೆಗಳಲ್ಲಿನ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿರುತ್ತದೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಬಂಧಿಸಿದಂತೆ ದಿನಾಂಕ 16.07.2024 ರಂದು ತಾತ್ಕಾಲಿಕ ಕೀ ಉತ್ತರಗಳನ್ನು ಪ್ರಕಟಿಸಿ ದಿನಾಂಕ 18.07.2024 ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದ್ದು, ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ 24.07.2024 ರಂದು ಪ್ರಕಟಿಸಲಾಗಿರುತ್ತದೆ.

ಅದರಂತೆ ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 03.08.2024 ಸಂಜೆ 5.30 ರೊಳಗೆ ನಿಗದಿತ ಲಿಂಕ್ ಮೂಲಕ ಪೂರಕ ದಾಖಲೆಗಳೊಂದಿಗೆ ಸಲ್ಲಿಸತಕ್ಕದ್ದು. ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. ಎಂದು ಕಾರ್ಯನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.