ಲಾರಿ ಪಲ್ಟಿ ಚಾಲಕನಿಗೆ ಗಂಭೀರ ಗಾಯ

ಲಾರಿ ಪಲ್ಟಿ ಚಾಲಕನಿಗೆ ಗಂಭೀರ ಗಾಯ
ಶಹಾಪುರ : ಲಾರಿ ಪಲ್ಟಿಯಾಗಿ ಚಾಲಕನಿಗೆ ಗಂಭೀರ ಗಾಯ ಆಗಿರುವ ಘಟನೆ ಮದರಕಲ್ ಬೀರನೂರು ಕ್ರಾಸ್ ಹತ್ತಿರ ನಡೆದಿದೆ, ಚಾಲಕನಿಗೆ ಶಹಪುರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ.
ತಾಲೂಕಿನ ಬಹುತೇಕ ಗ್ರಾಮೀಣ ಭಾಗದ ರಸ್ತೆಗಳು ಹದಗೆಟ್ಟಿರುವುದೇ ಈ ಘಟನೆಗೆ ಮುಖ್ಯ ಕಾರಣವಾಗಿದೆ ಎಂದು ಸಾರ್ವಜನಿಕರು ಹೇಳಲಾಗುತ್ತಿದ್ದಾರೆ. ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೂ ಹಾಗೂ ಜನಪ್ರತಿನಿಧಿಗಳು ಗಮನಕ್ಕೆ ತಂದರು ಪ್ರಯೋಜನೆಯ ಆಗಿಲ್ಲ.
ಮುಂದೆ ಆಗುವ ಅನಾಹುತಗಳನ್ನು ತಪ್ಪಿಸುವ ಸಲುವಾಗಿ ಕೂಡಲೇ ಈ ರಸ್ತೆ ದುರಸ್ತಿ ಮಾಡಿಕೊಡಬೇಕು ಇಲ್ಲದಿದ್ದರೆ ಉಗ್ರವಾದ ಹೋರಾಟ ಹಮ್ಮಿಕೊಳ್ಳಲಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ನಿಂಗಣ್ಣ ಕರಡಿ ಆಗ್ರಹಿಸಿದ್ದಾರೆ