ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಆಗ್ರಹಿಸಿದೆ
ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಆಗ್ರಹಿಸಿದೆ
ಕಲಬುರಗಿ: ಚಿತ್ತಾಪುರದಲ್ಲಿ ನ.2ರಂದು ಆರ್ ಎಸ್‌ಎಸ್ ಪಥಸಂಚಲನಕ್ಕೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದಿಂದ ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಸಿಬ್ಬಂದಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾ ಜಿಲ್ಲಾಧ್ಯಕ್ಷ ಮಹಾದೇವ ಮೋಘಾ, ಉಪಾಧ್ಯಕ್ಷರಾದ ಸಂಪತಕುಮಾರ ವಳಕೇರಿ, ಪ್ರಧಾನ ಕಾರ್ಯದರ್ಶಿ ಅರುಣ ಭರಣಿ, ಸಹಕಾರ್ಯದರ್ಶಿ ಅಶೋಕ ಸಂಗೀತಕರ ಮತ್ತಿರರು ಉಪಸ್ಥಿತರಿದ್ದರು.