ಪ್ರೊಬೇಷನರ್ಸ್ ನೇಮಕಾತಿಗೆ ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ :

ಪ್ರೊಬೇಷನರ್ಸ್ ನೇಮಕಾತಿಗೆ ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ :

ಪ್ರೊಬೇಷನರ್ಸ್ ನೇಮಕಾತಿಗೆ ಪರೀಕ್ಷೆ ಹಿನ್ನೆಲೆ, ಪರೀಕ್ಷಾ ಕೇಂದ್ರಕ್ಕೆ ಡಿ.ಸಿ.ಭೇಟಿ :

ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರ್ಸ್ ಗ್ರೂಪ್ 'ಎ' ಮತ್ತು ಗ್ರೂಪ್ 'ಬಿ' ವೃಂದದ 384 ಹುದ್ದೆಗಳ ನೇಮಕಾತಿಗೆ ಮಂಗಳವಾರ ಪರೀಕ್ಷೆ ನಡೆಸಿದ್ದು, ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಕಲಬುರಗಿ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆ ಪರಿಶೀಲಿಸಿದರು.

ನಗರದ ಎನ್.ವಿ. ಪ್ರೌಢ ಶಾಲೆ, ಮಿಲಿಮದ್ ಪದವಿ ಪೂರ್ವ ಕಾಲೇಜು, ಎನ್.ವಿ. ಬಾಲಕರ ಪ್ರೌಢ ಶಾಲೆಗಳಿಗೆ ಭೇಟಿ ನೀಡಿದ ಅವರು, ಪರೀಕ್ಷೆ ಸಂದರ್ಭದಲ್ಲಿ ಲೋಕಸೇವಾ ಆಯೋಗ ವಿಧಿಸಿರುವ ನಿಯಮಗಳನ್ನು ಪ್ರತಿಯೊಬ್ಬ ಅಭ್ಯರ್ಥಿ ಪಾಲಿಸಬೇಕೆಂದು ಸೂಚಿಸಿದರು.

ಕಲಬುರಗಿ ನಗರದ 35 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆದಿದ್ದು,‌ ಸುಮಾರು 11 ಸಾವಿರಕ್ಕೂ ಹೆಚ್ಚಿನ ಅಭ್ಯರ್ಥಿಗಳು ಪರೀಕ್ಷೆ ಬರೆದರು.