ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ
ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಸಚಿವ ಡಾ.ಶರಣಪ್ರಕಾಶ ಪಾಟೀಲ
ಸೇಡಂ.28ಸೋಮವಾರ ಸೇಡಂ ಪಟ್ಟಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ ಸ್ವೀಕರಿಸಿದರು.
ಸೋಮವಾರ ಮಧ್ಯಾಹ್ನದಿಂದಲೇ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸೇಡಂ ತಾಲೂಕಿನ ವಿವಿಧ ಗ್ರಾಮದಿಂದ ಆಗಮಿಸಿದ ಜನರು ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರನ್ನು ಭೇಟಿಯಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಂಡರು. ಸ್ಥಳದಲ್ಲಿಯೇ ಸಂಭಂದಿಸಿದ ಅಧಿಕಾರಿಗಳಿಗೆ ಫೋನ್ ಕರೆ ಮೂಲಕ ತಾಕೀತು ಮಾಡಿ ಸೂಕ್ತ ಪರಿಹಾರ ನೀಡುವಲ್ಲಿ ಸಚಿವರು ಮುತುವರ್ಜಿ ವಹಿಸಿದರು.
ಬೆಳೆ ಪರಿಹಾರ, ರಸ್ತೆ ನಿರ್ಮಾಣ ಹಾಗೂ ಶಾಲಾ ಕಡ್ಟಡ ಸೇರಿದಂತೆ ವಿದ್ಯುತ್ ಸಂಪರ್ಕದ ಬಗ್ಗೆ ಬೇಡಿಕೆಗಳ ಬಗ್ಗೆ ಬಂದ ಮನವಿಗಳನ್ನು ಪರಿಶೀಲನೆ ನಡೆಸಿ ಅಧಿಕಾರಿಗಳಿಗೆ ನಿಗಾವಹಿಸಿ ಕ್ರಮಕ್ಕೆ ಸಚಿವ ಡಾ.ಶರಣಪ್ರಕಾಶ ಸೂಚಿಸಿದರು.
ಕೈ ಮುಗಿದ ಧನ್ಯವಾದ ತಿಳಿಸಿದ ಜನರು
ಸೋಮವಾರ ಸಂಜೆವರೆಗೂ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಿದ ಜನರ ಸಮಸ್ಯೆಗಳನ್ನು ಆಲಿಸುತ್ತಿರುವ ಸಚಿವ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಕೈ ಮುಗಿದ ಧನ್ಯವಾದ ಹೇಳಿದ ದೃಶ್ಯಗಳು ಕಂಡುಬಂದವು.
