ಸಗರ ಕೆಪಿಎಸ್ ಶಾಲೆ ಮುಂದೆ ದಿಢೀರನೆ ಪ್ರತಿಭಟನೆ.
 
                                ಸಗರ ಕೆಪಿಎಸ್ ಶಾಲೆ ಮುಂದೆ ದಿಢೀರನೆ ಪ್ರತಿಭಟನೆ.
ಶಹಾಪುರ : ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಹಿಂದಿ ಶಿಕ್ಷಕರಾದ ಅಲ್ಲಾಭಕ್ಷ ಬಡಿಗೇರ ಸರಿಯಾದ ಶಾಲೆಗೆ ಬಾರದ ಸಲುವಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು ದಿಡೀರನೆ ಪ್ರತಿಭಟನೆ ನಡೆಸಿದರು.
ಕಳೆದ ಮೂರು ವರ್ಷಗಳ ಹಿಂದೆ ಈ ಶಾಲೆಗೆ ವರ್ಗಾವಣೆಗೊಂಡು ಬಂದು ಇಲ್ಲಿಯವರೆಗೆ ಸರಿಯಾಗಿ ಕರ್ತವ್ಯ ನಿರ್ವಹಿಸದೆ ಬೇಜವಾಬ್ದಾರಿತನದಿಂದ ವರ್ತಿಸುತ್ತಿದ್ದು,ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳಿಗೆ ಪಾಠ ಮಾಡದೆ ಶಾಲೆಗೆ ಚಕ್ಕರ್ ಹಾಕಿ ಮೋಜು ಮಸ್ತಿಯಲ್ಲಿ ತೊಡಗುತ್ತಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಶಿಕ್ಷಕನ ಈ ರೀತಿ ವರ್ತನೆಯಿಂದ ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಬದುಕಿಗೆ ಬಹುದೊಡ್ಡ ಪೆಟ್ಟು ಬೀಳುತ್ತದೆ ಎಂದು ಪಾಲಕರು ಇಂದು ಪ್ರತಿಭಟಿಸಿ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಸಪ್ಟೆಂಬರ್ 4 ರಿಂದ ಇಲ್ಲಿಯವರೆಗೆ ಯಾವುದೇ ಅನುಮತಿ ಇಲ್ಲದೆ ಕರ್ತವ್ಯಕ್ಕೆ ಈ ಶಿಕ್ಷಕ ಅನಧಿಕೃತವಾಗಿ ಗೈರು ಹಾಜರಾಗಿದ್ದಾರೆ.ಈ ವಿಷಯದ ಕುರಿತು ಹಿರಿಯ ಮೇಲಾಧಿಕಾರಿಗಳಿಗೆ ಸಮಗ್ರ ವರದಿ ನೀಡಿ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗಿದೆ ಎಂದು ಉಪ ಪ್ರಾಂಶುಪಾಲರು ಪತ್ರಿಕೆಗೆ ಹೇಳಿಕೆ ನೀಡಿದ್ದಾರೆ.
 

 kkeditor
                                    kkeditor                                 
                    
                 
                    
                 
                    
                 
                    
                 
                    
                 
                    
                 
                    
                 
    
             
    
             
    
             
    
             
    
             
    
             
    
 
    
 
    
 
    
 
    
 
    
                                        
                                     
    
 
    
