ಸೌಜನ್ಯ ಅನುಮಾನಾಸ್ಪದ ಸಾವು ಸೂಕ್ತ ತನಿಖೆಗೆ ಮಾನಪ್ಪ ಹಡಪದ ಆಗ್ರಹ
 
                                ಸೌಜನ್ಯ ಅನುಮಾನಾಸ್ಪದ ಸಾವು ಸೂಕ್ತ ತನಿಖೆಗೆ ಮಾನಪ್ಪ ಹಡಪದ ಆಗ್ರಹ
ಶಹಾಪೂರ : ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೆಕಲ್ ಗ್ರಾಮದ ಸೌಜನ್ಯ ಹಡಪದ ಎಂಬ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕೆಂದು ಸಾಮಾಜಿಕ ಕಾರ್ಯಕರ್ತ ಮಾನಪ್ಪ ಹಡಪದ ಆಗ್ರಹಿಸಿದ್ದಾರೆ.
ಅತ್ಯಾಚಾರ ವ್ಯೆಸಗಿ ಕೊಲೆ ಮಾಡಿ ಮೃತದೇಹವನ್ನು ಕಾಲುವೆಗೆ ಎಸೆದಿರುವ ಶಂಕೆ ವ್ಯಕ್ತವಾಗುತ್ತಿದ್ದು ಬಾಲಕಿಯ ಸಾವಿಗೆ ಕಾರಣರಾದವರನ್ನು,ಸೂಕ್ತ ತನಿಖೆ ಮಾಡಿ ತಪ್ಪಿತಸ್ಥರಿಗೆ ಮರಣದಂಡನೆ ವಿಧಿಸಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದ್ದಾರೆ.
ಅಮಾನವೀಯ ಕೃತ್ಯಗಳು ದಿನದಿಂದ ದಿನಕ್ಕೆ ಜಿಲ್ಲೆಯಾದ್ಯಂತ ಹೆಚ್ಚುತ್ತಿವೆ,ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ವಿಫಲ ಗೊಂಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
 

 kkeditor
                                    kkeditor                                 
                    
                 
                    
                 
                    
                 
                    
                 
                    
                 
                    
                 
                    
                 
    
             
    
             
    
             
    
             
    
             
    
             
    
 
    
 
    
 
    
 
    
 
    
                                        
                                     
    
 
    
